Select Your Language

Notifications

webdunia
webdunia
webdunia
webdunia

ಮತ್ತೆ ನಾಲ್ಕು ಜನರಲ್ಲಿ ಕೊರೊನಾ ವೈರಸ್ – ಒಟ್ಟು 14 ಸೋಂಕಿತರು

ಮತ್ತೆ ನಾಲ್ಕು ಜನರಲ್ಲಿ ಕೊರೊನಾ ವೈರಸ್ – ಒಟ್ಟು 14 ಸೋಂಕಿತರು
ಬೆಳಗಾವಿ , ಭಾನುವಾರ, 12 ಏಪ್ರಿಲ್ 2020 (17:10 IST)
ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ನಾಲ್ಕು ಕೋವಿಡ್-19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ.

ಈ ನಾಲ್ಕು ಹೊಸ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟಾರೆ 14 ಕ್ಕೆ ಏರಿದಂತಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಪ್ರಕಾರ ನಾಲ್ಕು ಜನರಲ್ಲಿ ಸೋಂಕು ಪತ್ತೆಯಾಗಿದೆ.

ಬೆಳಗಾವಿ ಜಿಲ್ಲೆ ರಾಯಬಾಗ ತಾಲ್ಲೂಕಿನ 19 ವರ್ಷದ ವ್ಯಕ್ತಿ (ಪಿ-223); 55 ವರ್ಷದ ವ್ಯಕ್ತಿ (ಪಿ-225);  25 ವರ್ಷದ ಯುವಕ(ಪಿ-226)ನಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂವರೂ ಕೂಡ ಈಗಾಗಲೇ ಸೋಂಕಿತರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಿ-150 ಜತೆ ಸಂಪರ್ಕಕ್ಕೆ ಬಂದಿದ್ದರು.

ಅದೇ ರೀತಿ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮದ 38 ವರ್ಷದ ವ್ಯಕ್ತಿ (ಪಿ-224)ಯಲ್ಲೂ ಸೋಂಕು ದೃಢಪಟ್ಟಿದ್ದು, ಇವರು ಪಿ-128 ಜತೆ ಸಂಪರ್ಕಕ್ಕೆ ಬಂದಿದ್ದರು ಎಂದು ಆರೋಗ್ಯ ಇಲಾಖೆ ತಿಳಿಸಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಬ್ಯಾಂಕ್ ಗಳಿಗೆ ಹೋಗೋದಕ್ಕೂ ನಿಷೇಧ ಹೇರಿದ ಜಿಲ್ಲಾಧಿಕಾರಿ