ರಾಜಧಾನಿ ಬೆಂಗಳೂರು ಮಹಿಳೆಯರಿಗೆ ಸುರಕ್ಷಿತ ಅಲ್ಲವೆಂದು ಮತ್ತು ಸಾಬೀತಾಗಿದೆ. ಇದಕ್ಕೆ ಪುಷ್ಠಿ ನೀಡುವಂತೆ ಹನುಮಂತನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ವರದಿಯಾಗಿದೆ.
16 ವರ್ಷದ ಯುವತಿಯ ಜತೆ ಕೆಲ ದಿನಗಳಿಂದ ಗೆಳೆತನ ಹೊಂದಿದ್ದ ಆರೋಪಿಗಳು, ಏನೋ ಕಾರಣ ಹೇಳಿ ಆಕೆಯನ್ನು ಪುಸಲಾಯಿಸಿ ಕರೆದುಕೊಂಡು ಅತ್ಯಾಚಾರ ನಡೆಸಿದ್ದಾರೆ. ಆ ಸಂದರ್ಭದಲ್ಲಿ ಅವರೆಲ್ಲರೂ ಮದ್ಯ ಸೇವಿಸಿದ್ದರೆಂದು ತಿಳಿದು ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಪೀಡಿತ ಯುವತಿ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಆರೋಪಿಗಳನ್ನು ಬಂಧಿಸಲಾಗಿದ್ದು, ಅವರನ್ನು ಸಂತೋಷ್, ಸೂರ್ಯ, ಮಹೇಶ್, ಕಿರಣ್ ಮತ್ತು ಮಂಜುನಾಥ್ ಎಂದು ಗುರುತಿಸಲಾಗಿದೆ.