Select Your Language

Notifications

webdunia
webdunia
webdunia
webdunia

ಜೆಡಿಎಸ್ ಪಕ್ಷದಲ್ಲಿ ಮತ್ತೆ ಭಿನ್ನಮತ ಸ್ಫೋಟ: ಜಮೀರ್ ದೆಹಲಿಗೆ

ಜೆಡಿಎಸ್ ಪಕ್ಷದಲ್ಲಿ ಮತ್ತೆ ಭಿನ್ನಮತ ಸ್ಫೋಟ: ಜಮೀರ್ ದೆಹಲಿಗೆ
ಬೆಂಗಳೂರು , ಗುರುವಾರ, 26 ಮೇ 2016 (15:46 IST)
ರಾಜ್ಯ ಜೆಡಿಎಸ್ ಪಕ್ಷದಲ್ಲಿ ಮತ್ತೆ ಭಿನ್ನಮತ ಸ್ಫೋಟವಾಗಿದ್ದು, ಜೆಡಿಎಸ್ ಶಾಸಕ ಜಮೀರ್ ಅಹ್ಮದ್ ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ದಿಗ್ವೀಜಯ್ ಸಿಂಗ್‌ ಅವರನ್ನು ಭೇಟಿ ಮಾಡಲು ದೆಹಲಿಗೆ ತೆರಳಲಿದ್ದಾರೆ.
 
ಕಳೆದ ರಾತ್ರಿ ಖಾಸಗಿ ಹೋಟೆಲ್‌ನಲ್ಲಿ ನಡೆದ ಜೆಡಿಎಸ್‌ ಬಂಡಾಯ ಶಾಸಕರ ಮನವೊಲಿಸುವ ಪ್ರಯತ್ನ ವಿಫಲವಾಗಿದ್ದು, ಜೆಡಿಎಸ್‌ ಪಕ್ಷದ ಐವರು ಬಂಡಾಯ ಶಾಸಕರಾದ ಜಮೀರ್ ಅಹ್ಮದ್, ಶ್ರೀನಿವಾಸ್, ಚೆಲುವರಾಯ ಸ್ವಾಮಿ, ಬಾಲಕೃಷ್ಣ ಮತ್ತು ಇಕ್ಬಾಲ್ ಅನ್ಸಾರಿ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಸಿ.ರಾಮಮೂರ್ತಿ ಅವರನ್ನು ಬೆಂಬಲಿಸಲು ಮುಂದಾಗಿದ್ದಾರೆ. 
 
ಇಂದು ಮಧ್ಯಾಹ್ನ ತುಮಕೂರು ರಸ್ತೆಯಲ್ಲಿರುವ ಗೋಲ್ಡನ್ ಪಾಮ್ ರೆಸಾರ್ಟ್‌‌ನಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮತ್ತು ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದ್ದು, ನಾವ್ಯಾರು ಸಭೆಗೆ ಹೋಗುವುದಿಲ್ಲ ಎಂದು ಶಾಸಕ ಜಮೀರ್ ಅಹ್ಮದ್ ಪ್ರತಿಕ್ರಿಯೆ ನೀಡಿದ್ದಾರೆ.
 
 
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ನಾಳೆ ಹೊರರಾಜ್ಯದ ವೆಂಕಯ್ಯ ನಾಯ್ಡು ನಾಮಪತ್ರ ಸಲ್ಲಿಕೆ ಸಾಧ್ಯತೆ: ಬಿಜೆಪಿ