Publish Date: Sun, 05 Nov 2017 (16:57 IST)
Updated Date: Sun, 05 Nov 2017 (16:59 IST)
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಈ ಬಾರಿ ಮಳೆ ನಿಲ್ಲುವ ಲಕ್ಷಣವೇ ಕಾಣುತ್ತಿಲ್ಲ. ತಮಿಳುನಾಡು ರಾಜಧಾನಿಯಲ್ಲಿ ವರುಣ ಅಬ್ಬರಿಸಿದ ಬೆನ್ನಲ್ಲೇ ಬೆಂಗಳೂರಿಗೂ ವರುಣನ ಆಗಮನವಾಗಿದೆ.
ಇಂದು ಮಧ್ಯಾಹ್ನದ ನಂತರ ನಗರದ ಹಲವೆಡೆ ಮಳೆಯಾಗಿದೆ. ಹೆಬ್ಬಾಳ, ಸಿಲ್ಕ್ ಬೋರ್ಡ್ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ.
ವಾಯುಭಾರ ಕುಸಿತದ ಪರಿಣಾಮ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಚೆನ್ನೈನಲ್ಲಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಇದರ ಬೆನ್ನಲ್ಲೇ ಮತ್ತೆ ಬೆಂಗಳೂರಿಗೆ ವರುಣನ ಆಗಮನವಾಗಿದ್ದು, ಜನರು ಮತ್ತೆ ಆತಂಕಕ್ಕೊಳಗಾಗುವಂತೆ ಮಾಡಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ