Webdunia - Bharat's app for daily news and videos

Install App

ಶೀಘ್ರದಲ್ಲಿ ಜಮೀರ್ ಅಹ್ಮದ್ ವಿರುದ್ಧ ಶಿಸ್ತು ಕ್ರಮ: ಕುಮಾರಸ್ವಾಮಿ ಸಂಕೇತ

Webdunia
ಸೋಮವಾರ, 30 ಮೇ 2016 (15:38 IST)
ಬಂಡಾಯ ಶಾಸಕ ಜಮೀರ್ ಅಹ್ಮದ್ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವ ದಿನ ಹತ್ತಿರವಾಗುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. 
 
ವಿಧಾನಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ, ಶಾಸಕ ಜಮೀರ್ ಅಹ್ಮದ್ ಅವರಿಂದ ಪಕ್ಷಕ್ಕೆ ತುಂಬಾ ಡ್ಯಾಮೆಜ್ ಆಗಿದೆ. ಪಕ್ಷಕ್ಕಿಂತ ವ್ಯಕ್ತಿ ದೊಡ್ಡವನಲ್ಲ. ಆದರೆ, ಶಾಸಕ ಜಮೀರ್ ಅಹ್ಮದ್ ಹೆಬ್ಬಾಳ ಚುನಾವಣೆ ಪ್ರಚಾರದಲ್ಲಿ ಎಲ್ಲಕ್ಕಿಂತ ಧರ್ಮ ದೊಡ್ಡದು ಎಂದು ಹೇಳಿಕೆ ನೀಡಿದ್ದರು ಎಂದು ಹೇಳಿದ್ದಾರೆ.
 
ಧರ್ಮಕ್ಕೆ ಹೆಚ್ಚು ಮಹತ್ವ ನೀಡುವ ಶಾಸಕ ಜಮೀರ್ ಅಹ್ಮದ್, ಜೆಡಿಎಸ್ ಪಕ್ಷದ ಮುಸ್ಲಿಂ ಅಭ್ಯರ್ಥಿಯನ್ನು ಏಕೆ ಬೆಂಬಲಿಸುತ್ತಿಲ್ಲ. ಇದೀಗ ಅವರ ಬಣ್ಣ ಬಯಲಾಗಿದೆ ಎಂದು ಹೇಳಿದ್ದಾರೆ.
 
ಬಂಡಾಯ ಶಾಸಕರಾದ ಜಮೀರ್ ಅಹ್ಮದ್ ಮಾತ್ರ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುತ್ತೇನೆ ಎಂದು ಹೇಳಿದ್ದು, ಉಳಿದ ನಾಲ್ವರು ಬಂಡಾಯ ಶಾಸಕರ ನಮ್ಮ ಜೋತೆಯಲ್ಲಿಯೇ ಇದ್ದಾರೆ. ಶಾಸಕ ಜಮೀರ್ ಅಹ್ಮದ್ ಅವರು ಪಕ್ಷಕ್ಕೆ ಡ್ಯಾಮೆಜ್ ಮಾಡುತ್ತಿರುವುದರಿಂದ ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವ ದಿನ ಹತ್ತಿರವಾಗುತ್ತಿದೆ ಎಂದು  ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಾಯ್ಲೆಟ್‌ನಲ್ಲಿರುವಾಗಲೇ ಕೋರ್ಟ್ ವಿಚಾರಣೆಗೆ ಹಾಜರಾದ ವ್ಯಕ್ತಿ, Video Viral

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ವಿಚಾರ ಬಾಯ್ಬಿಟ್ಟರೆ ವಿಡಿಯೋ ಹರಿಬಿಡುವುದಾಗಿ ಸಂತ್ರಸ್ತೆಗೆ ಬೆದರಿಕೆ

ಸೊಸೆಯನ್ನು ಕೊಂದು ನಾಟಕವಾಡಿದ್ದ ಮಾವ ಹತ್ಯೆಗೂ ಮುನ್ನಾ ಮಾಡಿದ್ದ ನೀಚ ಕೆಲಸ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಮೇಲೆ ರೇಪ್ ಕೇಸ್ ಗೆ ಬಿಗ್ ಟ್ವಿಸ್ಟ್

ಕೇರಳ ಶಾಲೆಗಳಲ್ಲಿ ಜುಂಬಾ ನೃತ್ಜಕ್ಕೆ ಮುಸ್ಲಿಂ ಗುಂಪಿನಿಂದ ವಿರೋಧ

ಮುಂದಿನ ಸುದ್ದಿ
Show comments