Publish Date: Sat, 05 Aug 2017 (13:10 IST)
Updated Date: Sat, 05 Aug 2017 (13:12 IST)
ಗುಜರಾತ್ ರಾಜ್ಯಸಭೆ ಚುನಾವಣೆಯಲ್ಲಿ ರಾಜ್ಯಸಭೆ ಅಭ್ಯರ್ಥಿ ಅಹ್ಮದ್ ಪಟೇಲ್ ಜಯ ಖಚಿತ ಎಂದು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಗುಜರಾತ್ ಕಾಂಗ್ರೆಸ್‌ನ ಶಾಸಕರು ಒಗ್ಗಟ್ಟಾಗಿದ್ದರಿಂದ ಅಹ್ಮದ್ ಪಟೇಲ್ ರಾಜ್ಯಸಭೆ ಚುನಾವಣೆಯಲ್ಲಿ ಜಯಗಳಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಗುಜರಾತ್ ಶಾಸಕರು ರಾಜ್ಯದಲ್ಲಿ ತುಂಬಾ ಸಂತೋಷದಿಂದ ಕಾಲ ಕಳೆಯುತ್ತಿದ್ದಾರೆ. ಯಾವುದೇ ಶಾಸಕರಿಗೆ ಅಸಮಾಧಾನವಿಲ್ಲ. ಮಾಧ್ಯಮ ವರದಿಗಳಲ್ಲಿ ಸತ್ಯಾಂಶವಿಲ್ಲ ಎಂದರು.
ಬಿಜೆಪಿ ಹೈಕಮಾಂಡ್ ನಾಯಕರು ಯಾವುದೇ ರಣತಂತ್ರ ರೂಪಿಸಿದರೂ ಸಫಲವಾಗುವುದಿಲ್ಲ. ಹಿರಿಯ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಜಯಗಳಿಸುವುದನ್ನು ಯಾರು ತಡೆಯಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿರುದ್ಧ ಸಚಿವ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.