Select Your Language

Notifications

webdunia
webdunia
webdunia
webdunia

ಬಿಎಂಟಿಸಿಯಿಂದ ಪ್ರಯಾಣಿಕರ ಅನುಕೂಲಕ್ಕಾಗಿ 5 ಹೆಚ್ಚುವರಿ ಮಾರ್ಗಗಳಲ್ಲಿ ವಾಯು ವಜ್ರ ಸೇವೆ

ಬಿಎಂಟಿಸಿಯಿಂದ ಪ್ರಯಾಣಿಕರ ಅನುಕೂಲಕ್ಕಾಗಿ 5 ಹೆಚ್ಚುವರಿ ಮಾರ್ಗಗಳಲ್ಲಿ ವಾಯು ವಜ್ರ ಸೇವೆ
bangalore , ಭಾನುವಾರ, 2 ಜನವರಿ 2022 (21:09 IST)
ಬೆಂಗಳೂರು: ಪ್ರಯಾಣಿಕರ ಅನುಕೂಲಕ್ಕಾಗಿ ನಾಳೆಯಿಂದ ಹೆಚ್ಚುವರಿಯಾಗಿ ಐದು ಮಾರ್ಗಗಳಲ್ಲಿ 'ವಾಯು ವಜ್ರ' ಹವಾನಿಯಂತ್ರಿತ ಬಸ್‌ಗಳ ಸೇವೆಯನ್ನು ಬಿಎಂಟಿಸಿ ಆರಂಭಿಸಲಿದೆ ಎಂದು ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
 
ನಗರದ ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್, ಕೆಂಪೇಗೌಡ ಬಸ್ ನಿಲ್ದಾಣದಿಂದ ಜನಪ್ರಿಯ ಟೌನ್‌ಶಿಪ್, ಕಾವೇರಿ ಭವನದಿಂದ ದೊಡ್ಡಬಳ್ಳಾಪುರ, ಕೆಂಪೇಗೌಡ ಬಸ್ ನಿಲ್ದಾಣದಿಂದ ವೈಟ್‌ಫೀಲ್ಡ್ ಟಿಟಿಎಂಸಿ, ಹೆಬ್ಬಾಳದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್‌ವರೆಗಿನ ಮಾರ್ಗಗಳಲ್ಲಿ ವಜ್ರ ಸೇವೆ ಆರಂಭಿಸಲಾಗುವುದು ಎಂದು ಬಿಎಂಟಿಸಿ ಹೇಳಿದೆ.
 
ಕೆಂಪೇಗೌಡ ಬಸ್ ನಿಲ್ದಾಣದಿಂದ ಕಾಡುಗೋಡಿ ಬಸ್ ನಿಲ್ದಾಣದವರೆಗೆ ಮತ್ತು ಬನಶಂಕರಿ ಟಿಟಿಎಂಸಿಯಿಂದ ಐಟಿಪಿಎಲ್‌ವರೆಗೆ ಹವಾನಿಯಂತ್ರಿತ ಸಾರಿಗೆ ಸೇವೆಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಎಂದೂ ಉಲ್ಲೇಖಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ ಬಿಎಂಟಿಸಿ