Select Your Language

Notifications

webdunia
webdunia
webdunia
webdunia

ಮೈಸೂರಿನಲ್ಲಿ ವಾಯುಪಡೆ ನೇಮಕಾತಿ ರ್ಯಾಲಿ ಡಿ.5 ರಿಂದ

ವಾಯುಪಡೆ
ಭಾರತೀಯ ವಾಯುಪಡೆಯ ಗ್ರೂಪ್ ‘ವೈ’ ಟ್ರೇಡ್‍ನ ಏರ್‍ಮೆನ್ ಹುದ್ದೆಗಳ ನೇಮಕಾತಿ ರ್ಯಾಲಿಯನ್ನು  ಡಿಸೆಂಬರ್ 5ರಿಂದ ಮೈಸೂರಿನ ನಜರಬಾದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.  

ಡಿಸೆಂಬರ್ 5ರಂದು ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬೀದರ, ಕಲಬುರಗಿ, ಯಾದಗಿರಿ, ರಾಯಚೂರು, ಧಾರವಾಡ ಮತ್ತು ಉತ್ತರ ಕನ್ನಡ(ಕಾರವಾರ) ಜಿಲ್ಲೆಯ ಅಭ್ಯರ್ಥಿಗಳಿಗೆ ಹಾಗೂ ಡಿಸೆಂಬರ್ 7ರಂದು ಬೆಂಗಳೂರು, ರಾಮನಗರ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮೈಸೂರು, ಮಡಿಕೇರಿ, ದಕ್ಷಿಣ ಕನ್ನಡ (ಮಂಗಳೂರು), ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಹಾಸನ, ಗದಗ, ಕೊಪ್ಪಳ, ಹಾವೇರಿ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಯ ಅಭ್ಯರ್ಥಿಗಳಿಗೆ ದೇಹದಾಢ್ರ್ಯತೆ ಹಾಗೂ ಲಿಖಿತ ಪರೀಕ್ಷೆ ನಡೆಯಲಿದೆ.

 ವಿದ್ಯಾರ್ಹತೆ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಭಾರತೀಯ ವಾಯುಪಡೆಯ www.airmenselection.cdac.in ವೆಬ್‍ಸೈಟ್‍ನ್ನು ಅಥವಾ 7 ಏರ್‍ಮೆನ್ ಸೆಲೆಕ್ಷನ್ ಸೆಂಟರ್, ನಂ.1, ಕಬ್ಬನ್ ರಸ್ತೆ, ಬೆಂಗಳೂರು-560001,  ದೂರವಾಣಿ ಸಂಖ್ಯೆ: 080-25592199 ಅಥವಾ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದು.



Share this Story:

Follow Webdunia kannada

ಮುಂದಿನ ಸುದ್ದಿ

ಚಳಿಗಾಲ ಅಧಿವೇಶನದತ್ತ ಎಲ್ಲರ ಚಿತ್ತ