Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Krishnaveni K
ಶುಕ್ರವಾರ, 13 ಜೂನ್ 2025 (14:05 IST)
ಅಹಮ್ಮದಾಬಾದ್: ಏರ್ ಇಂಡಿಯಾ ವಿಮಾನ ಹಾಸ್ಟೆಲ್ ಕಟ್ಟದ ಮೇಲೆ ಬೀಳುತ್ತಿದ್ದಂತೆ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಹೀಗಾಗಿ ಜೀವ ಉಳಿಸಿಕೊಳ್ಳಲು ವಿದ್ಯಾರ್ಥಿಗಳು ಕಟ್ಟಡದಿಂದ ಜಿಗಿದಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗಿದೆ.

ಅಹಮ್ಮದಾಬಾದ್ ನಿಂದ ಟೇಕ್ ಆಫ್ ಆದ ವಿಮಾನ ಕೆಲವೇ ಸೆಕೆಂಡುಗಳಲ್ಲಿ ಮೆಡಿಕಲ್ ಕಾಲೇಜು ಹಾಸ್ಟೆಲ್ ಕಟ್ಟದ ಮೇಲೆ ಬಿದ್ದಿದೆ. ಮಧ್ಯಾಹ್ನದ ಸಮಯವಾಗಿದ್ದರಿಂದ ಸಾಕಷ್ಟು ಜನ ಊಟಕ್ಕೆಂದು ಮೇಲಿನ ಮಾಳಿಗೆಯಲ್ಲಿರುವ ಹಾಲ್ ಗೆ ಬಂದಿದ್ದರು. ಅಷ್ಟರಲ್ಲೇ ವಿಮಾನ ಬಂದೆರಗಿದೆ.

ಕೆಲವರು ಊಟದ ತಟ್ಟೆಯನ್ನು ಅಲ್ಲಿಯೇ ಬಿಟ್ಟು ಜೀವ ಉಳಿಸಿಕೊಳ್ಳುವ ಸಲುವಾಗಿ ಓಡಿದ್ದಾರೆ. ಒಂದು ತುದಿಯಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಹೀಗಾಗಿ ಬೆಂಕಿಯ ಕೆನ್ನಾಲೆಗೆಯಿಂದ ಬಚಾವ್ ಆಗಿ ಜೀವ ಉಳಿಸಿಕೊಳ್ಳಲು ಕೆಲವರು ಬಹುಮಹಡಿ ಕಟ್ಟಡದಿಂದ ಜಿಗಿದಿದ್ದಾರೆ.

ಅವರು ಜಿಗಿಯುತ್ತಿದ್ದರೆ ಹಿಂದಿನಿಂದ ಹೊತ್ತಿ ಉರಿಯುತ್ತಿದ್ದ ಬೆಂಕಿಯ ಉಂಡೆಗಳೂ ಬೀಳುತ್ತಿತ್ತು. ಈ ಭಯಾನಕ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ: ಹಕ್ಕು ಕಸಿಯಲು ಹೊರಟವರಿಗೆ ಚಾಟಿ ಎಂದ ಬಿಜೆಪಿ

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ವಿಚಾರ: ಹೈಕೋರ್ಟ್ ಮಹತ್ವದ ಸೂಚನೆ

ಕದನ ವಿರಾಮಕ್ಕೆ ಒಪ್ಪಿದ ಪಾಕಿಸ್ತಾನ–ಅಫ್ಗಾನಿಸ್ತಾನ: ಮಧ್ಯಸ್ಥಿಕೆ ವಹಿಸಿದ್ದ ಕತಾರ್ ಹೇಳಿದ್ದೇನು

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನ ಮಳೆಯ ಅಬ್ಬರ: ಮೀನುಗಾರರಿಗೆ ವಾರ್ನಿಂಗ್‌

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಮುಂದಿನ ಸುದ್ದಿ
Show comments