Publish Date: Sun, 12 Aug 2018 (17:22 IST)
Updated Date: Sun, 12 Aug 2018 (17:25 IST)
ಹಲವು ವರ್ಷಗಳಿಂದ ಯಲಹಂಕ ವಾಯುನೆಲೆಯಲ್ಲಿ ವೈಮಾನಿಕ ಪ್ರದರ್ಶನ ಯಶಸ್ವಿಯಾಗಿ ನಡೆಸಿಕೊಂಡು ಬರಲಾಗುತ್ತಿದೆ. ಈಗ ಏಕಾಏಕಿಯಾಗಿ ಪ್ರತಿಷ್ಠಿತ ಏರ್ ಶೋವನ್ನು ಉತ್ತರ ಪ್ರದೇಶದ ಲಕ್ನೋಗೆ ಸ್ಥಳಾಂತರ ಮಾಡಿರುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಏರ್ ಶೋ ಕಡೆಗಣಿಸುವ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡಲಾಗುತ್ತಿದೆ. ಏರ್ ಶೋ ಸ್ಥಳಾಂತರ ಮಾಡಿರುವುದು ಸಮಂಜಸವಲ್ಲ ಎಂದು ಹೇಳಿದ್ದಾರೆ.
1996ರಿಂದ ರಾಜ್ಯದ ಯಲಹಂಕ ವಾಯುನೆಲೆಯಲ್ಲಿ ಏರ್ ಶೋ ನಡೆಸಿಕೊಂಡು ಬರಲಾಗುತ್ತಿದೆ. ಈ ಬಾರಿ ಅದನ್ನು ಲಕ್ನೋಗೆ ಸ್ಥಳಾಂತರ ಮಾಡಿರುವುದಕ್ಕೆ ಸಿಎಂ ಅಸಮಧಾನ ವ್ಯಕ್ತಪಡಿಸಿದ್ದಾರೆ.