ಬಂಗಾಳ ಕೊಲ್ಲಿ ಮತ್ತು ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ

Webdunia
ಮಂಗಳವಾರ, 9 ನವೆಂಬರ್ 2021 (21:31 IST)
ಬೆಂಗಳೂರು: ಬಂಗಾಳ ಕೊಲ್ಲಿ ಮತ್ತು ಅರಬ್ಬೀ ಸಮುದ್ರದಲ್ಲಿ ಉಂಟಾಗುತ್ತಿರುವ ವಾಯುಭಾರ ಕುಸಿತದ ಪರಿಣಾಮ ಈ ಬಾರಿ ರಾಜ್ಯದಲ್ಲಿ ಭಾರಿ ಮಳೆ ಸುರಿಯುತ್ತಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
 
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತ: 
 
ಬಂಗಾಳ ಕೊಲ್ಲಿಯಲ್ಲಿ ಕಂಡುಬರುತ್ತಿರುವ ವಾಯುಭಾರ ಕುಸಿತದಿಂದಾಗಿ ಮುಂದಿನ ನಾಲ್ಕು ದಿನ ರಾಜ್ಯದ ದಕ್ಷಿಣ ಒಳನಾಡಿನ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆ ಸುರಿಯಲಿದೆ. ಈ ಹಿನ್ನೆಲೆಯಲ್ಲಿ  ಎರಡು ದಿನ ಯೆಲ್ಲೋ ಅಲರ್ಟ್‌ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 
 
ಸದ್ಯಕ್ಕೆ ತಮಿಳುನಾಡು ಕರಾವಳಿಯಲ್ಲಿ ಸುಳಿಗಾಳಿ ನಿರ್ಮಾಣವಾಗಿದೆ. ಇದರ ಪ್ರಭಾವದಿಂದ ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ಮಂಗಳವಾರ ಗುಡುಗು ಸಹಿತ ಧಾರಾಕಾರ ಮಳೆ ಬೀಳಲಿದೆ. ನಾಳೆ ಮಳೆ ಅಬ್ಬರ ಕಡಿಮೆಯಾಗಲಿದೆ. ನವೆಂಬರ್ 11 ಹಾಗೂ 12 ರಂದು ಕೆಲವೆಡೆ ಭಾರಿ ಮಳೆ ಬೀಳಲಿದೆ ಎಂದು ಮಾಹಿತಿ ದೊರೆತಿದೆ.
 
ಪ್ರಮುಖವಾಗಿ ಬೆಂಗಳೂರು ನಗರ , ಬೆಂಗಳೂರು ಗ್ರಾಮಾಂತರ, ಕೊಡಗು, ಹಾಸನ, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ ಎಂದು ಹೇಳಿದೆ
 
ಅರಬ್ಬೀ ಸಮುದ್ರದಲ್ಲೂ ವಾಯುಭಾರ ಕುಸಿತ: 
 
ಪೂರ್ವ ಅರಬ್ಬಿ ಸಮುದ್ರದ ಮಧ್ಯದಲ್ಲಿ ಕೂಡ ಸೃಷ್ಟಿಯಾಗಿರುವ ಪ್ರಬಲ ವಾಯುಭಾರ ಕುಸಿತವು ಪಶ್ಚಿಮ ದಿಕ್ಕಿನ ಮಾರ್ಗವಾಗಿ ಹಾದು ರಾಜ್ಯದ ಕರಾವಳಿ  ಸಮೀಪಿಸಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಕೆಲವು ಕಡೆ ಭಾರಿ ಮಳೆಯ ಸಾಧ್ಯತೆ ಇದೆ ಎಂದಿದೆ.
 
ಉತ್ತರ ಒಳನಾಡಿನಲ್ಲಿ ಒಣ ಹವೆ: 
 
ಉತ್ತರ ಒಳನಾಡಿನಲ್ಲಿ ಹಿಂಗಾರು ಕ್ಷೀಣಿಸಿದೆ. 
ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಉಳಿದೆಡೆ ಒಣಹವೆ ಮುಂದುವರಿಯಲಿದೆ ಎನ್ನುವ ಮಾಹಿತಿ ದೊರೆತಿದೆ.
 
ಕನಿಷ್ಠ ಗರಿಷ್ಠ ತಾಪಮಾನ: 
 
ಕಾರವಾರದಲ್ಲಿ ಗರಿಷ್ಠ 33.4 ಡಿಗ್ರಿ ಬೆಂಗಳೂರಿನಲ್ಲಿ ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆಯ ವರದಿ ಹೇಳಿದೆ.
 
ಚಳಿ ಗಾಳಿ: 
 
ರಾಜಧಾನಿಯಲ್ಲಿ ತಾಪಮಾನ ಕಡಿಮೆ ಇರುವ ಕಾರಣ ತಂಪು ಗಾಳಿ ಬೀಸುತ್ತಿದೆ. ಸಂಜೆಯಾಗುತ್ತಿದ್ದಂತೆ ಚಳಿ ಪ್ರಮಾಣದಲ್ಲಿ ಏರಿಕೆ ಕಂಡು ಬರುತ್ತಿದೆ ಎಂದು ಮಾಹಿತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದು ಸಿಗರೇಟ್ ಕಿಡಿಯಿಂದ ಭಸ್ಮವಾಯಿತು 7 ಗೂಡಂಗಡಿಗಳು

ಪ್ರಧಾನಿ ಮೋದಿ ಉಡುಪಿಗೆ ಬರುತ್ತಿದ್ದಂತೇ ಸಚಿವ ದಿನೇಶ್ ಗುಂಡೂರಾವ್ ಮೂಲಕ ಸಿದ್ದರಾಮಯ್ಯ ತಲುಪಿಸಿದ್ದೇನು

ಉಡುಪಿಯಲ್ಲಿ ಪ್ರಧಾನಿ ಮೋದಿ: ಚಿತ್ರ ಹಿಡಿದು ನಿಂತಿದ್ದ ಮಕ್ಕಳಿಗೆ ಮೋದಿ ಹೇಳಿದ್ದೇನು

ಪ್ರಧಾನಿ ಮೋದಿ ಇನ್ನು ಭಾರತ ಭಾಗ್ಯವಿಧಾತ: ಉಡುಪಿಯಲ್ಲಿ ವಿಶೇಷ ಬಿರುದು ನೀಡಿ ಪುತ್ತಿಗೆ ಶ್ರೀ

ಮೋದಿಗಾಗಿ ಬಿಸಿಲಲ್ಲಿ ನಿಂತು ಕಾಯುತ್ತಿದ್ದ ವಿದ್ಯಾರ್ಥಿಗಳು: ನಿರಾಸೆ ಮಾಡದ ಪ್ರಧಾನಿ

ಮುಂದಿನ ಸುದ್ದಿ
Show comments