Publish Date: Mon, 18 Oct 2021 (22:17 IST)
Updated Date: Mon, 18 Oct 2021 (22:21 IST)
ಅರಬ್ಬಿ ಸಮುದ್ರದ ಲಕ್ಷದ್ವೀಪ ಭಾಗದಲ್ಲಿ ಹಾಗೂ ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಕರ್ನಾಟಕದಲ್ಲಿ ಅ. 22 ರವರೆಗೂ ಮಳೆ ಮುಂದುವರಿಯಲಿದೆ.
ರಾಜ್ಯದ ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾವೇರಿ, ಧಾರವಾಡ, ಬೆಳಗಾವಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಗದಗ ಸೇರಿ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ.
ಇನ್ನೆರಡು ದಿನಗಳಲ್ಲಿ ಹಿಂಗಾರು ಆರಂಭವಾಗಲಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನ 14 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.