Webdunia - Bharat's app for daily news and videos

Install App

ರಾಜೀನಾಮೆ ನೀಡಿದ್ದಕ್ಕೆ ಕಾರಣ ಬಿಚ್ಚಿಟ್ಟ ಅಜಿತ್ ಪವಾರ್

Webdunia
ಭಾನುವಾರ, 29 ಸೆಪ್ಟಂಬರ್ 2019 (12:31 IST)
ಮುಂಬೈ : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಎನ್ ​ಸಿಪಿಯ ಹಿರಿಯ ಮುಖಂಡ ಅಜಿತ್ ಪವಾರ್​ ಇದೀಗ ತಾವು ರಾಜೀನಾಮೆ ನೀಡಲು ಕಾರಣವೆನೆಂಬುದನ್ನು ಬಿಹಿರಂಗಪಡಿಸಿದ್ದಾರೆ.




ಶುಕ್ರವಾರ ಸಂಜೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಎನ್​ಸಿಪಿಯ ಹಿರಿಯ ಮುಖಂಡ ಅಜಿತ್ ಪವಾರ್​, ರಾಜೀನಾಮೆಗೆ ಕಾರಣವನ್ನು ತಿಳಿಸಿರಲಿಲ್ಲ. ಇದೀಗ ರಾಜೀನಾಮೆ ನೀಡಿದ ಬಳಿಕ ತಮ್ಮ ಮಾವ ಶರದ್​ ಪವಾರ್​ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾನು ಉಪಮುಖ್ಯಮಂತ್ರಿಯಾಗಲು ಅದಕ್ಕೆ ಶರದ್​ ಪವಾರ್ ಅವರೇ ಕಾರಣ. ಇದೀಗ ಶರದ್​ ಸಾಹೇಬರ ಒಬ್ಬರ ಹೆಸರೇ ಪ್ರಕರಣ ಸಂಬಂಧ ಓಡಾಡುತ್ತಿದೆ. ಈ ವಯಸ್ಸಿನಲ್ಲಿ ಅವರು ನನ್ನ ಕಾರಣದಿಂದ ಅಪಖ್ಯಾತಿ ಎದುರಿಸಬೇಕಾಗಿದೆ ಎಂದು ನಾನು ಭಾವಿಸಿದ್ದರಿಂದ ಗೊಂದಲಕ್ಕೊಳಗಾಗಿದ್ದೆ. ಆದ್ದರಿಂದ, ಆತ್ಮಸಾಕ್ಷಿಗೆ ಅನುಗುಣವಾಗಿ ರಾಜೀನಾಮೆ ನೀಡಲು ನಿರ್ಧರಿಸಿದೆ ಎಂದು ಹೇಳಿದ್ದಾರೆ.


ಕೇಂದ್ರದ ಮಾಜಿ ಸಚಿವ ಶರದ್​ ಪವಾರ್ ಸೇರಿದಂತೆ ಅಜಿತ್​ ಪವಾರ್ ಅವರ ಹೆಸರನ್ನು ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕ್​ ಹಗರಣ ಪ್ರಕರಣದಲ್ಲಿ ಸೇರಿಸಲಾಗಿದೆ. ಈ ಬಗ್ಗೆ ಮಹಾರಾಷ್ಟ್ರದ ಲ್ಲಿ ಅವರ ಬೆಂಬಲಿಗರು ಭಾರೀ ಪ್ರತಿಭಟನೆಗೆ ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕವು ಅಪರಾಧಿಗಳ ರಾಜ್ಯವಾಗುತ್ತಿದೆ: ಶೋಭಾ ಕರಂದ್ಲಾಜೆ ಆಕ್ಷೇಪ

ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದಿದ್ದ ವ್ಯಕ್ತಿ ಅರೆಸ್ಟ್

NEET ಪರೀಕ್ಷೆ ಹೇಗಿತ್ತು ಎಂದರೆ ವಿದ್ಯಾರ್ಥಿಗಳು ಶಾಕ್ ಆಗ್ತಿದ್ದಾರೆ: ಕಾರಣ ಇಲ್ಲಿದೆ

ಕಾನೂನು ಬಾಹಿರ ಟೆಂಡರ್ ಮೂಲಕ ಸರ್ಕಾರದಿಂದ ಭಾರೀ ಮೋಸ: ಛಲವಾದಿ ನಾರಾಯಣಸ್ವಾಮಿ

Arecanut price today: ಇಂದು ಅಡಿಕೆ, ಕಾಳುಮೆಣಸು ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments