ರಾತ್ರಿ ಮದ್ಯ ಸೇವಿಸಿದ ವ್ಯಕ್ತಿ ಬೆಳಗ್ಗೆ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಬಾರ್ ಮುಂದೆ ಶವವಿಟ್ಟು ಪ್ರತಿಭಟನೆ ನಡೆದಿದೆ
ತರೀಕೆರೆ ತಾಲೂಕಿನ ಕರಕುಚ್ಚಿ ಕಾಲೋನಿಯಲ್ಲಿ ಘಟನೆ ನಡೆದಿದ್ದು ಕಳೆದ ರಾತ್ರಿ ಮದ್ಯ ಸೇವಿಸಿದ್ದ ಮಂಜುನಾಥ್ ಇಂದು ಬೆಳಗ್ಗೆ ಮೃತಪಟ್ಟಿದ್ದಾನೆ.ಈ ಬಾರಿನಲ್ಲಿ ಕುಡಿದಿದ್ದರಿಂದಲೇ ಮಂಜುನಾಥ್ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿರುವ ಸ್ಥಳೀಯರು ಈ ಹಿಂದೆಯೂ ಇದೇ ರೀತಿ ಮೂರ್ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ ಎಂದು ದೂರಿದ್ದಾರೆ.
ಕೂಡಲೇ ಬಾರ್ ಮುಚ್ಚುವಂತೆ ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯರು ಬಾರ್ ಮಾಲೀಕನ ಮೇಲೆ ಕ್ರಮಕ್ಕೆ ಒತ್ತಾಯಿಸಿದ್ದಾರೆ.