ರಾಜ್ಯ ರಾಜಧಾನಿಯಲ್ಲಿ ಟ್ರಾಫಿಕ್ ನಿಯಮಗಳ ಸಂಬಂಧ ಕಟ್ಟುನಿಟ್ಟಿನ ಕ್ರಮಗಳಿವೆ.
ಆದರೂ ಬೆಂಗಳೂರಲ್ಲಿ ನಿತ್ಯ ಸುಮಾರು 20 ಸಾವಿರ ಸವಾರರು ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುತ್ತಾರೆ. ಹೀಗೆ ನಿಯಮ ಉಲ್ಲಂಘಿಸಿದವರಿಗೆ ನೋಟಿಸ್ ಕೊಡೋದು ಸಂಚಾರ ಪೊಲೀಸ್ ಇಲಾಖೆಗೆ ದೊಡ್ಡ ತಲೆ ನೋವಾಗಿದೆ. ಈ ನಿಟ್ಟಿನಲ್ಲಿ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.
ಬೆಂಗಳೂರು ಟ್ರಾಫಿಕ್ ಪೊಲೀಸರು ಪ್ರಾಯೋಗಿಕವಾಗಿ ಯೋಜನೆಯೊಂದನ್ನು ಪ್ರಾರಂಭಿಸಿದ್ದಾರೆ. ಇದರ ಅಡಿಯಲ್ಲಿ ಸಂಚಾರ ನಿಯಮಗಳ ಉಲ್ಲಂಘನೆಗಾಗಿ ವಾಹನ ಮಾಲೀಕರಿಗೆ SMS ಮೂಲಕ ಎಚ್ಚರಿಕೆಗಳನ್ನು ಕಳುಹಿಸಲಾಗುತ್ತದೆ. ನಗರದಲ್ಲಿ ನಿತ್ಯ ಸರಾಸರಿ 20,000 ನೋಟಿಸ್ಗಳನ್ನು ನೀಡಲಾಗುತ್ತಿದೆ. ಇದರ ವೆಚ್ಚವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ SMS ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಜಂಟಿ ಪೊಲೀಸ್ ಆಯುಕ್ತ (ಸಂಚಾರ) ರವಿಕಾಂತೇಗೌಡ ತಿಳಿಸಿದರು.