ಜೆಡಿಎಸ್ ಜೊತೆ ಹೊಂದಾಣಿಕೆ ಪ್ರಶ್ನೆಯೇ ಇಲ್ಲ : ಸಿ.ಟಿ. ರವಿ

Webdunia
ಮಂಗಳವಾರ, 28 ಮಾರ್ಚ್ 2023 (14:24 IST)
ಚಿಕ್ಕಮಗಳೂರು : ನಮ್ಮ ಮೊದಲ ರಾಜಕೀಯ ವಿರೋಧಿ ಜೆಡಿಎಸ್ ಎಂದು ಅಮಿತ್ ಶಾ ಹೇಳಿದ್ದಾರೆ. ಹೀಗಿರುವಾಗ ಹೊಂದಾಣಿಕೆ ಎಲ್ಲಿಂದ? ಹೊಂದಾಣಿಕೆ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದರು.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಕೂಡ ನಾವು ಯಾವುದೇ ಹೊಂದಾಣಿಕೆ ಮಾಡಿಕೊಂಡಿರಲಿಲ್ಲ. ಹೊಂದಾಣಿಕೆಯಾಗಿದ್ರೆ, ಹೆಚ್ಡಿಕೆ ವಿರುದ್ಧ ಯೋಗೀಶ್ವರ್ ಸ್ಪರ್ಧೆ ಮಾಡುತ್ತಿರಲಿಲ್ಲ. ನನ್ನ ವಿರುದ್ಧ ಜೆಡಿಎಸ್ ಅಭ್ಯರ್ಥಿ 32 ಸಾವಿರ ಮತ ತೆಗೆದುಕೊಂಡರು. ಹೊಂದಾಣಿಕೆ ಮಾಡಿದ್ರೆ ಅಷ್ಟು ಮತಗಳ ತೆಗೆದುಕೊಳ್ತಿದ್ರಾ? ನಮಗೆ ಹೊಂದಾಣಿಕೆ ಅಗತ್ಯವಿಲ್ಲ, ಬಿಜೆಪಿ ಸ್ವತಂತ್ರವಾಗಿಯೇ ಸ್ಪರ್ಧೆ ಮಾಡುತ್ತದೆ ಎಂದು ಸ್ಪಷ್ಟಪಡಿಸಿದರು.

ವರುಣಾದಲ್ಲಿ ಸಿದ್ದು ವಿರುದ್ಧ ಬಿಜೆಪಿಯಿಂದ ಯಾರು ಸ್ಪರ್ಧಿ ಎನ್ನುವುದನ್ನು ಪಾರ್ಲಿಮೆಂಟರಿ ಬೋರ್ಡ್ ಸಿದ್ಧ ಮಾಡುತ್ತದೆ. ನಾವು ಯಾರ ವಿರುದ್ಧ ಅಂತಿಲ್ಲ, ನಾವು ಬಿಜೆಪಿ ಪರ ಅಷ್ಟೆ. ನಮ್ಮದು ವೈಚಾರಿಕ ರಾಜಕೀಯ ಪಕ್ಷವಾಗಿದ್ದು, ನಮ್ಮ ಪಕ್ಷದ ವಿಚಾರವನ್ನು ಬೆಳೆಸೋದಷ್ಟೆ ನಮ್ಮ ಗುರಿ. ನಮ್ಮದು ನಕಾರಾತ್ಮಕ ರಾಜಕೀಯ ಅಲ್ಲ, ಸಕಾರಾತ್ಮಕ ರಾಜಕೀಯ, ಪಕ್ಷ ಬೆಳೆಸುವುದು ಎಂದು ತಿಳಿಸಿದರು. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಂಜಯ್ ಸರೋಗಿ ಹೆಗಲಿಗೆ

ಮದ್ಯಪಾನ ಪಾರ್ಟಿ ವೇಳೆ ಜಗಳ, ಒಬ್ಬನ ಹತ್ಯೆಯಲ್ಲಿ ಅಂತ್ಯ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್

ಮೂರು ರಾಷ್ಟ್ರಗಳ ಪ್ರವಾಸ: ಅಮ್ಮಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ

ದೆಹಲಿ ದಟ್ಟ ಹೊಗೆ, ಮಂಜು: ಇಂದು 40 ವಿಮಾನಗಳು ರದ್ದು

ಮುಂದಿನ ಸುದ್ದಿ
Show comments