Select Your Language

Notifications

webdunia
webdunia
webdunia
webdunia

ನವೆಂಬರ್ 14ರಿಂದ 20ರವರೆಗೆ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆ

ನವೆಂಬರ್ 14ರಿಂದ 20ರವರೆಗೆ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆ
ಕಲಬುರಗಿ , ಗುರುವಾರ, 25 ಅಕ್ಟೋಬರ್ 2018 (17:24 IST)
ದೇಶಾದ್ಯಂತ ನವೆಂಬರ್  14 ರಿಂದ 20ರವರೆಗೆ 65ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಆಚರಿಸಲಾಗುತ್ತಿದೆ.
ಇದರ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯ ಎಲ್ಲಾ ವಿವಿಧ ವರ್ಗದ ಸಹಕಾರ ಸಂಘಗಳು   ವಿವಿಧ ಶೀರ್ಷಿಕೆಗಳಡಿ ಸಹಕಾರ ಸಪ್ತಾಹವನ್ನು ಆಚರಿಸಬೇಕೆಂದು ಕಲಬುರಗಿ ಸಹಕಾರ ಸಂಘಗಳ ನಿಬಂಧಕರು ತಿಳಿಸಿದ್ದಾರೆ.

       ನವೆಂಬರ್ 14ರಂದು ಸಹಕಾರಿ ಮಾರಾಟ, ಸಂಸ್ಕರಣ ಮತ್ತು ಶೇಖರಣೆ, ನವೆಂಬರ್ 15ರಂದು ಸಾವಯವ ಕೃಷಿ ಮತ್ತು ಶೂನ್ಯ ಬಂಡವಾಳದ ಕೃಷಿಯಲ್ಲಿ ಸಹಕಾರ ಸಂಸ್ಥೆಗಳ ಪ್ರಮುಖ ಪಾತ್ರ., ನವೆಂಬರ್ 16ರಂದು ಸಹಕಾರ ಸಂಸ್ಥೆಗಳ ಮೂಲಕ ಮೌಲ್ಯ ವರ್ಧನೆ ಮತ್ತು ಬ್ರಾಂಡ್ ನಿರ್ಮಾಣ, ನವೆಂಬರ್ 17ರಂದು ಸಾರ್ವಜನಿಕ ಖಾಸಗಿ, ಸಹಕಾರಿ ಸಹಭಾಗಿತ್ವ ನಿರ್ಮಾಣ, ನವೆಂಬರ್ 18ರಂದು ಸಹಕಾರ ಸಂಸ್ಥೆಗಳ ಮೂಲಕ ಸಹಕಾರಿ ಯೋಜನೆಗಳು ಮತ್ತು ಆದಾಯೋತ್ಪನ್ನ ಕುರಿತು ಜಾಗೃತಿ ಮೂಡಿಸುವುದು,ನವೆಂಬರ್ 19ರಂದು ಯುವಜನ, ಮಹಿಳಾ ಮತ್ತು ಅಬಲವರ್ಗಕ್ಕಾಗಿ ಸಹಕಾರ ಸಂಸ್ಥೆಗಳು  ಹಾಗೂ ನವೆಂಬರ್ 20ರಂದು ಸಹಕಾರ ಸಂಸ್ಥೆಗಳ ಮೂಲಕ ಕೌಶಲ್ಯ, ತಾಂತ್ರಿಕತೆ ವೃಧ್ಧಿಪಡಿಸುವುದು ಎಂಬ ಶೀರ್ಷಿಕೆಗಳಡಿ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಆಚರಿಸಬೇಕು.

ಎಲ್ಲ ವರ್ಗದ ಸಹಕಾರಿ ಸಂಘಗಳು ಸಹಕಾರ ಸಪ್ತಾಹ ಆಚರಿಸಿ ಕಲಬುರಗಿ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯಲ್ಲಿ ಭಾವಚಿತ್ರದೊಂದಿಗೆ ವರದಿ ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಮನೆಗೆ ನುಗ್ಗಿ ಮಾಲೀಕನ ಕೊಂದ ದುಷ್ಕರ್ಮಿಗಳು