Select Your Language

Notifications

webdunia
webdunia
webdunia
webdunia

ಅಖಿಲ ಭಾರತ ಫುಟ್‌ಬಾಲ್ ಸಂಸ್ಥೆ ಅಮಾನತು

ಅಖಿಲ ಭಾರತ ಫುಟ್‌ಬಾಲ್ ಸಂಸ್ಥೆ ಅಮಾನತು
bangalore , ಗುರುವಾರ, 18 ಆಗಸ್ಟ್ 2022 (19:12 IST)
ಫೆಡರೇಶನ್ ಹಿಂದೆ ಮೂರನೇ ವ್ಯಕ್ತಿಗಳ ಪ್ರಭಾವ ಇದೆ ಎನ್ನಲಾಗಿದ್ದು, ಇದು ಕಾನೂನುಗಳ ಗಂಭೀರ ಉಲ್ಲಂಘನೆ ಎಂದು ಫಿಫಾ ಆರೋಪಿಸಿದೆ. AIFFನ ಅಮಾನತಿನಿಂದಾಗಿ ಈ ಬಾರಿ ಅಕ್ಟೋಬರ್‌ನಲ್ಲಿ ಭಾರತದಲ್ಲಿ ನಡೆಯಬೇಕಿದ್ದ 17 ವರ್ಷದ ಒಳಗಿನ ಮಹಿಳಾ ವಿಶ್ವಕಪ್ ಟೂರ್ನಿಯನ್ನು ಮೊದಲೇ ನಿರ್ಧರಿಸಿದಂತೆ ನಡೆಸಲು ಸಾಧ್ಯವಿಲ್ಲ ಎಂದು ಫಿಫಾ ಹೇಳಿದೆ. AIFFನ ಮಾಜಿ ಮುಖ್ಯಸ್ಥ, ಎನ್‌ಸಿಪಿ ನಾಯಕ ಪ್ರಫುಲ್‌ ಪಟೇಲ್ ತಮ್ಮ ಅಧಿಕಾರಾವಧಿಯನ್ನು ಮೀರಿ ಅಧಿಕಾರದಲ್ಲಿಯೇ ಉಳಿದುಕೊಂಡಿದ್ದರು. ಬಳಿಕ ಅವರನ್ನು ಅಧ್ಯಕ್ಷ ಸ್ಥಾನದಿಂದ ಇಳಿಸಿ ಆಡಳಿತಾಧಿಕಾರಿಗಳನ್ನು ಸುಪ್ರೀಂ ಕೋರ್ಟ್ ನೇಮಕ ಮಾಡಿತ್ತು. AIFFನಲ್ಲಿ ಸೃಷ್ಟಿಯಾಗಿರುವ ಗೊಂದಲ ಬಗೆಹರಿಸಲು ಫಿಫಾ ಮತ್ತು ಎಎಫ್‌ಸಿ ಜೂನ್‌ನಲ್ಲಿ ಗಡುವು ನೀಡಿತ್ತು. ‘AIFFಗೆ ಹೊಸದಾಗಿ ನಿಯಮಾವಳಿ ರೂಪಿಸಿ, ಜುಲೈ 31ರ ಒಳಗೆ ಅನುಮೋದನೆ ನೀಡಬೇಕು. ಸೆ.15ರ ಒಳಗಾಗಿ ಚುನಾವಣೆ ನಡೆಸಿ ಹೊಸ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬರಬೇಕು ಎಂದು ಫಿಫಾ ಸೂಚಿಸಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಲ್ಲೊಂದು ಮನ ಕಲಕುವ ಸ್ಟೋರಿ..!