Select Your Language

Notifications

webdunia
webdunia
webdunia
webdunia

33 ಹಾಲಿ ಶಾಸಕರಿಗೆ ಟಿಕೆಟ್ ಖಚಿತ: ಕುಮಾರಸ್ವಾಮಿ

33 ಹಾಲಿ ಶಾಸಕರಿಗೆ ಟಿಕೆಟ್ ಖಚಿತ: ಕುಮಾರಸ್ವಾಮಿ
ಚಿತ್ರದುರ್ಗ , ಗುರುವಾರ, 23 ಫೆಬ್ರವರಿ 2017 (16:04 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎಲ್ಲಾ 33 ಹಾಲಿ ಶಾಸಕರಿಗೆ ಟಿಕೆಟ್ ಕೊಡುವುದು ಖಚಿತ ಎಂದು ಮಾಜಿ ಸಿಎಂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
 
ಪಕ್ಷದ ಶಾಸಕ ಪಿಳ್ಳಮುನಿಶಾಮಪ್ಪ ಅವರಿಗೆ ಗೊಂದಲ ಉಂಟಾಗಿದ್ದರಿಂದ ರಾಜೀನಾಮೆ ನೀಡಿದ್ದಾರೆ. ನನ್ನ ಗಮನಕ್ಕೆ ಬಂದ ನಂತರ ರಾಜೀನಾಮೆ ವಾಪಸ್ ಪಡೆಯುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.
 
ನಾಯಕನಹಟ್ಟಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರಕ್ಕೆ ರೈತರ ಸಾಲ ಮನ್ನಾ ಮಾಡಲು ಮನಸ್ಸಿಲ್ಲ. ಮುಂದಿನ ಬಾರಿ ಜೆಡಿಎಸ್ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ಪಕ್ಷ ಅಧಿಕಾರಕ್ಕೆ ಬಂದಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.
 
ಮುಂದಿನ ವರ್ಷ ರೈತರ 25 ಸಾವಿರ ಸಾಲ ಮನ್ನಾ ಮಾಡುವ ನಿರೀಕ್ಷೆಯಿದೆ. ಸಾಲಕ್ಕೆ ಹೆದರಿ ರೈತರು ಆತ್ಮಹತ್ಯೆಗೆ ಶರಣಾಗುವುದು ಬೇಡ ಎಂದು ಮಾಜಿ ಸಿಎಂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಚೆಕ್‌ನಲ್ಲಿ ಕಪ್ಪ ನೀಡಿದ್ದರೆ ದಾಖಲೆ ಬಿಡುಗಡೆ ಮಾಡಿ: ಕುಮಾರಸ್ವಾಮಿಗೆ ಡಿವಿಎಸ್ ಸವಾಲ್