Select Your Language

Notifications

webdunia
webdunia
webdunia
webdunia

ರಾಜಕೀಯ ಮೀಸಲಾತಿಗಾಗಿ ಎಲ್ಲ ಕಾನೂನಾತ್ಮಕ ಪ್ರಯತ್ನ : ಬೊಮ್ಮಾಯಿ

ರಾಜಕೀಯ ಮೀಸಲಾತಿಗಾಗಿ ಎಲ್ಲ ಕಾನೂನಾತ್ಮಕ ಪ್ರಯತ್ನ : ಬೊಮ್ಮಾಯಿ
ಬೆಂಗಳೂರು , ಶುಕ್ರವಾರ, 13 ಮೇ 2022 (10:01 IST)
ಬೆಂಗಳೂರು : ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿಗಾಗಿ ಎಲ್ಲ ಕಾನೂನಾತ್ಮಕ ಪ್ರಯತ್ನ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
 
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಒದಗಿಸಲು ಕಾನೂನಾತ್ಮಕವಾಗಿ ಎಲ್ಲ ಪ್ರಯತ್ನಗಳನ್ನು ಮಾಡಲು ತೀರ್ಮಾನಿಸಲಾಗಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಪಟ್ಟಂತೆ ಕಾನೂನು ಸಚಿವರು, ಅಡ್ವೊಕೇಟ್ ಜನರಲ್ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸುಪ್ರೀಂ ಕೋರ್ಟ್ನ ಎರಡು ತೀರ್ಪುಗಳ ಸಂಪೂರ್ಣ ವಿಶ್ಲೇಷಣೆ ಮಾಡಲಾಗುತ್ತಿದೆ.

ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ನೀಡಲು ಆಯೋಗವನ್ನು ರಚಿಸಲಾಗಿದೆ. ವಿರೋಧಪಕ್ಷದ ನಾಯಕರು ಈ ಬಗ್ಗೆ ಪತ್ರ ಬರೆದಿದ್ದಾರೆ. ಈ ಎಲ್ಲ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು. 

ಮೀಸಲಾತಿ ವಿಚಾರದಲ್ಲಿ ತೆಗೆದುಕೊಳ್ಳಬೇಕಾದ ನಿಲುವು ಹಾಗೂ ಸಾಧಕ ಬಾಧಕಗಳ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು. ಇದುವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಸಂವಿಧಾನಾತ್ಮಕವಾಗಿ ಹಿಂದುಳಿದ ವರ್ಗಗಳಿಗೆ ಕಾನೂನು ರೀತ್ಯ ಪ್ರಾತಿನಿಧ್ಯ ನೀಡಲಾಗುತ್ತಿದೆ.

ಹಿಂದುಳಿದ ವರ್ಗಗಳ ರಾಜಕೀಯ ಪ್ರಾತಿನಿಧ್ಯ ನೀಡಿಯೇ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮಾಡಬೇಕೆಂಬುದು ಸರ್ಕಾರ ಹಾಗೂ ಎಲ್ಲ ಪಕ್ಷಗಳ ಅಭಿಪ್ರಾಯವಾಗಿದ್ದು, ಈ ನಿಟ್ಟಿನಲ್ಲಿ ಚುನಾವಣೆ ಪ್ರಕ್ರಿಯೆಗಳ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದರು. 

ಓಬಿಸಿಯನ್ನು ಪರಿಗಣಿಸುವ ಪ್ರಕ್ರಿಯೆ ಸಮಯ ತೆಗೆದುಕೊಳ್ಳಲಿದೆಯೇ ಎಂಬ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಮಧ್ಯಪ್ರದೇಶ ರಾಜ್ಯದವರು ಒಂದು ಆಯೋಗವನ್ನು ರಚಿಸಿ ವರದಿ ತರಿಸಿ ಸುಪ್ರೀಂ ಕೋರ್ಟ್ಗೆ ನೀಡಿತ್ತು.

ಈ ಸಂದರ್ಭದಲ್ಲಿ ಬಂದ ತೀರ್ಪಿನ ಬಗ್ಗೆ ರೀವ್ಯೂ ಪಿಟಿಷನ್ ಹಾಕಿಕೊಂಡಿದ್ದಾರೆ. ರಾಜ್ಯದಲ್ಲಿ ಮೀಸಲಾತಿ ಬಗ್ಗೆ ಹಲವಾರು ವರದಿಗಳಿದ್ದು, ಅವುಗಳನ್ನು ಬಳಸಿಕೊಳ್ಳುವ ಬಗ್ಗೆಯೂ ಚಿಂತನೆ ನಡೆಯುತ್ತಿದೆ ಎಂದು ತಿಳಿಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಬ್ರೇಕ್‌ಫಸ್ಟ್‌ಗೆ ಹುಣಸೆಹಣ್ಣಿನ ಚಿತ್ರಾನ್ನ ಮಾಡಿ