ಕಳಸಾ ಬಂಡೂರಿ ಹಾಗೂ ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂದಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸರ್ವಪಕ್ಷ ನಿಯೋಗ ಸಭೆ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ನ್ಯಾಯಾಧೀಕರಣದಿಂದ ರಾಜ್ಯಕ್ಕೆ ಅನ್ಯಾಯವಾಗಿದ್ದು ದೌರ್ಬಾಗ್ಯಕರ ಸಂಗತಿ. ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಿ ಮಹದಾಯಿ ವಿವಾದವನ್ನು ಇತ್ಯರ್ಥಗೊಳಿಸಬೇಕು ಎಂದು ಆಗ್ರಹಿಸಿದರು.
ಮಹದಾಯಿ ವಿಷಯದಲ್ಲಿ ರಾಜ್ಯದ ಎಲ್ಲ ಸಂಸದರು ಜವಾಬ್ದಾರಿ ವಹಿಸಬೇಕು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮನವಿ ಮಾಡಿಕೊಂಡರು.
ಮಹದಾಯಿ ನ್ಯಾಯಾಧೀಕರಣದ ತೀರ್ಪು ವಿರೋಧಿಸಿ ಅಗಸ್ಟ್ 27 ರಂದು ರಾಜ್ಯದಲ್ಲಿ ರೈಲು ತಡೆ ಚಳುವಳಿ ಕೈಗೊಳ್ಳಲಾಗಿದೆ. ಈ ಚಳುವಳಿಗೆ ಎಲ್ಲ ಕನ್ನಡಪರ ಸಂಘಟನೆಗಳು ಬೆಂಬಲ ಸೂಚಿಸುತ್ತಿವೆ ಎಂದು ತಿಳಿಸಿದರು.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ