ಬೆಂಗಳೂರು : ಕೊರೊನಾ ತಡೆಗೆ ಮುಂಜಾಗ್ರತಾ ಕ್ರಮವಾಗಿ ಬೆಡ್, ಆಕ್ಸಿಜನ್ ಸೇರಿದಂತೆ ಸಕಲ ಸಿದ್ಧತೆಗಳನ್ನು ಮಾಡಲು ಎಲ್ಲಾ ಡಿಸಿಗಳಿಗೂ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆ ಆಗುತ್ತಿದೆ. ಓಮಿಕ್ರಾನ್ ಇಡೀ ದೇಶದಲ್ಲಿ ಜಾಸ್ತಿ ಆಗಿದೆ. ಕಳೆದ ಬಾರಿ ತೊಂದರೆ ಆದಂತೆ ಈ ಬಾರಿ ಆಗದಿರಲು ಎಚ್ಚರಿಕೆ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕ್ಯಾಬಿನೆಟ್ನಲ್ಲಿ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.
ಕೊರೊನಾ ತಡೆಗೆ ಎಲ್ಲೆಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ಸಿಎಂ ಜೊತೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಎರಡನೇ ಅಲೆಯ ಪಾಠ ನಮ್ಮ ಮುಂದೆ ಇದೆ.
ಹೀಗಾಗಿ ಕೊರೊನಾ ತಡೆಗೆ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಲು ಸಿಎಂ ಜೊತೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಈವರೆಗೂ ಯಾವುದೇ ತೀರ್ಮಾನ ಆಗಿಲ್ಲ. ಸಿಎಂ ಜೊತೆ ಸಭೆ ನಂತರ ನಿರ್ಧಾರ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.