Publish Date: Sat, 13 May 2023 (13:19 IST)
Updated Date: Sat, 13 May 2023 (13:13 IST)
ಬೆಂಗಳೂರು : ನಾವು ಒಂದು ವಿಪಕ್ಷವಾಗಿ ಜನರ ಸೇವೆ ಮಾಡುತ್ತೇವೆ. ಕಾಂಗ್ರೆಸ್ಗೆ ಆಲ್ ದಿ ಬೆಸ್ಟ್ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋಲು, ಗೆಲುವು ಸಹಜವಾಗಿದೆ. ಕಾಂಗ್ರೆಸ್ಗೆ ಜನರು ಆಶೀರ್ವಾದ ಮಾಡಿದ್ದಾರೆ.
ನಾವು ಒಂದು ವಿಪಕ್ಷವಾಗಿ ಜನರ ಸೇವೆ ಮಾಡುತ್ತೇವೆ. ಒಳ್ಳೆಯ ವಿರೋಧ ಪಕ್ಷವಾಗಿ ಕೆಲಸ ಮಾಡುತ್ತೇವೆ ಎಂದರು. ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಬಹುತೇಕ ಖಚಿತವಾಗಿದೆ.