ಸೌಜನ್ಯಾ ಮಾವ ವಿಠಲ ಗೌಡ ವಿರುದ್ಧ ಆರೋಪ: ಎಸ್‌ಐಟಿಗೆ ದೂರು ನೀಡಿದ ಧರ್ಮಸ್ಥಳ ನಿವಾಸಿಗಳು

Sampriya
ಗುರುವಾರ, 18 ಸೆಪ್ಟಂಬರ್ 2025 (16:06 IST)
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಕೊಲೆಯಾದ ಸೌಜನ್ಯಾ ಅವರ ಮಾವ ವಿಠಲ ಗೌಡ ವಿರುದ್ಧ ಧರ್ಮಸ್ಥಳ ನಿವಾಸಿಗಳು ಗಂಭೀರ ಹೊರಿಸಿ ಎಸ್‌ಐಟಿಗೆ ದೂರು ಸಲ್ಲಿಸಿದ್ದಾರೆ.

ಬುರುಡೆ ಪ್ರಕರಣದ ತನಿಖಾ ಹಂತದಲ್ಲಿ ವಿಠಲ ಗೌಡನಿಂದ ಎಸ್ಐಟಿ ತನಿಖೆ ದಾರಿ ತಪ್ಪಿಸುತ್ತಿದ್ದಾರೆ ಎಂದು ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಗೆ ಧರ್ಮಸ್ಥಳ ಗ್ರಾಮಸ್ಥ ಸಂದೀಪ್ ರೈ ದೂರು ಕೊಟ್ಟಿದ್ದಾರೆ. 

ಸಾಕ್ಷ್ಯ ನಾಶ ಮಾಡಲು ಸಾರ್ವಜನಿಕವಾಗಿ ಹೇಳಿಕೆ ನೀಡಿದ ಬಗ್ಗೆಯೂ ದೂರು ನೀಡಲಾಗಿದೆ. ವಿಠಲ ಗೌಡ ವಿರುದ್ಧ ತನಿಖೆ ನಡೆಸುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೂರು ಸ್ವೀಕರಿಸಿರುವ ಎಸ್‌ಐಟಿ ಅಧಿಕಾರಿಗಳು ಸ್ವೀಕೃತಿ ನೀಡಿದ್ದಾರೆ.

ಎಸ್‌ಐಟಿ ವಿಚಾರಣೆ ಮುಗಿಸಿ ಹೊರಬಂದು ವಿಠಲ ಗೌಡ ವಿಡಿಯೋ ಹರಿಬಿಟ್ಟಿದ್ದಾರೆ. ಎಸ್ಐಟಿ ಯಾವುದೇ ಮಾಹಿತಿ ನೀಡದೇ ಇದ್ದರೂ ವಿಡಿಯೋ ಹರಿಬಿಟ್ಟು ತನಿಖೆ ಹಾದಿ ತಪ್ಪಿಸುತ್ತಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.

ವಿಠಲ ಗೌಡನ ಹಿಂದೆ ಕೆಲ ವ್ಯಕ್ತಿಗಳು ಸೇರಿಕೊಂಡು ಷಡ್ಯಂತ್ರ ನಡೆಸುತ್ತಿದ್ದಾರೆ. ವಿಚಾರಣೆ ಮುಗಿಸಿ ಹೊರಗೆ ಬಂದ ಬಳಿಕ ಯೂಟ್ಯೂಬ್‌ಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಈ ಮೂಲಕ ತನಿಖೆಯ ಹಾದಿ ತಪ್ಪಿಸಲು ವಿಠಲ ಗೌಡ ಷಡ್ಯಂತ್ರ ರೂಪಿಸಿದ್ದಾರೆ ಎಂದು ದೂರಿನಲ್ಲಿ ಆರೋಪ ಮಾಡಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈತರ ಪ್ರತಿಭಟನೆಗೆ ಕೇಂದ್ರವನ್ನು ದೂರಿದ ಸಿದ್ದರಾಮಯ್ಯ: ಕಳ್ಳನಿಗೊಂದು ಪಿಳ್ಳೆ ನೆವ ಎಂದ ಪಬ್ಲಿಕ್

ಸರ್ಕಾರಕ್ಕೆ ಕೊನೆಯ ಎಚ್ಚರಿಕೆ ಕೊಟ್ಟ ಕಬ್ಬು ಬೆಳೆಗಾರರು: ಇದೇ ಕೊನೇ ಡೆಡ್ ಲೈನ್

Karnataka Weather: ರಾಜ್ಯದಲ್ಲಿ ಈ ಜಿಲ್ಲೆಗಳಿಗೆ ಇಂದೂ ಮಳೆಯ ಸಾಧ್ಯತೆ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments