Select Your Language

Notifications

webdunia
webdunia
webdunia
webdunia

ವಿಡಿಯೋ ಕಾಲ್ ಸಂಭಾಷಣೆ ಇಟ್ಟುಕೊಂಡು ಅತ್ಯಾಚಾರ ಆರೋಪ: ಶಾಸಕ ವಿನಯ್ ಕುಲಕರ್ಣಿ ದೂರು

ವಿಡಿಯೋ ಕಾಲ್ ಸಂಭಾಷಣೆ ಇಟ್ಟುಕೊಂಡು ಅತ್ಯಾಚಾರ ಆರೋಪ: ಶಾಸಕ ವಿನಯ್ ಕುಲಕರ್ಣಿ ದೂರು

Sampriya

ಬೆಂಗಳೂರು , ಬುಧವಾರ, 9 ಅಕ್ಟೋಬರ್ 2024 (17:34 IST)
Photo Courtesy X
ಬೆಂಗಳೂರು: ನನ್ನ ಮೇಲಿನ ಅತ್ಯಾಚಾರ ಆರೋಪ ಸತ್ಯಕ್ಕೆ ದೂರವಾದದ್ದು. ಇದು ನನ್ನ ವಿರುದ್ಧದ ಷಡ್ಯಂತ್ರವಾಗಿದೆ. ನನ್ನ ವಿರುದ್ಧ ಮಹಿಳೆಯೊಬ್ಬರು ಕಿರುಕುಳ ಆರೋಪ ಹೊರಿಸಿದ್ದಾರೆ ಮತ್ತು ಖಾಸಗಿ ಸುದ್ದಿ ವಾಹಿನಿಯ ಮುಖ್ಯಸ್ಥರೊಬ್ಬರು 2 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದಾರೆ ಎಂದು ಶಾಸಕ ವಿನಯ್ ಕುಲಕರ್ಣಿ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಿದ್ದಾರೆ.

ಕೇವಲ ಎರಡು-ಮೂರು ಸಲ ನಡೆದ ವಿಡಿಯೊ ಕಾಲ್ ಸಂಭಾಷಣೆ ಇಟ್ಟುಕೊಂಡು ಮಹಿಳೆ ಹೀಗೆ ಆರೋಪ ಮಾಡುತ್ತಿದ್ದಾರೆ. ಇದು ಸತ್ಯಕ್ಕೆ ದೂರವಾದದ್ದು. ಇಷ್ಟು ವರ್ಷದ ರಾಜಕೀಯ ಜೀವನದಲ್ಲಿ ಬದುಕಿದ್ದೇನೆ. ಇದರಲ್ಲಿ ನನ್ನದೇನೂ ಪಾತ್ರ ಇಲ್ಲ. ನಾನೂ ದೂರು ಕೊಟ್ಟಿದ್ದೇನೆ. ಈ ಬಗ್ಗೆ ತನಿಖೆ ಆಗಲಿ, ಸತ್ಯಾಸತ್ಯತೆ ಹೊರಬರಲಿ ಎಂದಿದ್ದಾರೆ.

ಶಾಸಕ ವಿನಯ್ ಕುಲಕರ್ಣಿ ಅವರ ದೂರಿನ ಮೇರೆಗೆ ಬೆಂಗಳೂರಿನ ಸಂಜಯನಗರ ಪೊಲೀಸರು ಖಾಸಗಿ ಕನ್ನಡ ಸುದ್ದಿ ವಾಹಿನಿಯ ಮುಖಸ್ಥ ಹಾಗೂ ಮಹಿಳೆ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ನೆಮ್ಮದಿ ಕಳೆದುಕೊಂಡ ಸಿಎಂಗೆ ನನ್ನಿಂದ್ದ ನಿರಾಳತೆ ಸಿಕ್ಕಿರುವುದು ಸಂತಸವಾಗಿದೆ: ಆರ್‌ ಅಶೋಕ್