Select Your Language

Notifications

webdunia
webdunia
webdunia
webdunia

ನೀತಿ ಸಂಹಿತೆ ಉಲ್ಲಂಘನೆ ಆರೋಪ: ಈಶ್ವರಪ್ಪ ವಿರುದ್ಧ ಎಫ್‌ಐಆರ್ ದಾಖಲು

ನೀತಿ ಸಂಹಿತೆ ಉಲ್ಲಂಘನೆ ಆರೋಪ: ಈಶ್ವರಪ್ಪ ವಿರುದ್ಧ ಎಫ್‌ಐಆರ್ ದಾಖಲು

Sampriya

ಶಿವಮೊಗ್ , ಭಾನುವಾರ, 7 ಏಪ್ರಿಲ್ 2024 (10:51 IST)
ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿಯ ಬಂಡಾಯ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ವಿರುದ್ಧ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಎಫ್ಐಆರ್ ದಾಖಲಾಗಿದೆ.

ಚುನಾವಣಾಧಿಕಾರಿಯಿಂದ ಅಗತ್ಯ ಅನುಮತಿ ಪಡೆಯದೆ ರಾಜಕೀಯ ಕಾರ್ಯಕ್ರಮ ಆಯೋಜಿಸಿದ ಹಿನ್ನೆಲೆಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ಈಶ್ವರಪ್ಪ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ ಎಂದು ತಿಳಿದುಬಂದಿದೆ.

ಬಿ.ಎಸ್‌. ಯಡಿಯೂರಪ್ಪ ವಿರುದ್ಧ ತೊಡೆತಟ್ಟಿ ಲೋಕಸಭಾ ಅಖಾಢಕ್ಕೆ ಧುಮುಕಿರುವ ಈಶ್ವರಪ್ಪ ಅವರು ತೀರ್ಥಹಳ್ಳಿ ತಾಲೂಕಿನ ನೊಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಬುತೀರ್ಥದ ದೇವಸ್ಥಾನದಲ್ಲಿ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು.

ನಂತರದಲ್ಲಿ ಹತ್ತಿರದ ಅರ್ಚಕರ ನಿವಾಸದ ಅಂಗಳದಲ್ಲಿ ಸುಮಾರು 50 ರಿಂದ 60 ವ್ಯಕ್ತಿಗಳೊಂದಿಗೆ ಸಭೆಯನ್ನು ನಡೆಸಿದ್ದಾರೆಂದು ಹೇಳಲಾಗುತ್ತಿದೆ. ಸಭೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ತಾತ್ಕಾಲಿಕ ವೇದಿಕೆಯನ್ನು ನಿರ್ಮಿಸಿ, 50 ಕುರ್ಚಿಗಳು ಮತ್ತು ಹ್ಯಾಂಡ್‌ಹೆಲ್ಡ್ ಮೈಕ್‌ ವ್ಯವಸ್ಥೆ ಮಾಡಿದ್ದು, ಈಶ್ವರಪ್ಪ ರಾಜಕೀಯ ಉದ್ದೇಶದಿಂದ ಭಾಷಣ ಮಾಡಿದ್ದರು ಎಂದು ತಿಳಿದುಬಂದಿದೆ.

ಇದು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಶನಿವಾರ ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ. ಸ್ಥಳೀಯ ನ್ಯಾಯಾಲಯದ ಅನುಮತಿ ಮೇರೆಗೆ ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ.
===
ಕೇಜ್ರಿವಾಲ್ ಬಂಧನ ಖಂಡಿಸಿ ಎಎಪಿ ಕಾರ್ಯಕರ್ತರ ಪ್ರತಿಭಟನೆ: ಇಂದು ದೇಶಾದ್ಯಂತ ಸಾಮೂಹಿಕ ಉಪವಾಸ

ನವದೆಹಲಿ: ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿಯನ್ನು ಬಂಧಿಸಿರುವುದನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರು ಮತ್ತು ಕಾರ್ಯಕರ್ತರು ಇಂದು ಸಾಮೂಹಿಕ ಉಪವಾಸ ಆಚರಿಸಲಿದ್ದಾರೆ.

ಕೇಜ್ರಿವಾಲ್ ಅವರನ್ನು ಆಪಾದಿತ ಮದ್ಯ ನೀತಿ ಹಗರಣದಲ್ಲಿ ಮಾರ್ಚ್ 21 ರಂದು ಬಂಧಿಸಲಾಯಿತು.  ಅದನ್ನು ಖಂಡಿಸಿ ದೇಶ ಹಾಗೂ ವಿದೇಶಗಳಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಬೆಂಬಲಿಗರು ಪಕ್ಷದ ಸಾಮೂಹಿಕ್ ಉಪವಾಸದಲ್ಲಿ ಭಾಗವಹಿಸಲಿದ್ದಾರೆ. ಜನರು ತಮ್ಮ ಮನೆಗಳಲ್ಲಿ ಉಪವಾಸ ಆಚರಿಸಿ, ದೆಹಲಿ ಮುಖ್ಯಮಂತ್ರಿಯನ್ನು ಬೆಂಬಲಿಸಬಹುದು ಎಂದು ಎಎಪಿ ನಾಯಕ ಗೋಪಾಲ್ ರೈ ಹೇಳಿದ್ದಾರೆ.

ಎಎಪಿಯ ಶಾಸಕರು, ಪದಾಧಿಕಾರಿಗಳು ಜಂತರ್ ಮಂತರ್‌ನಲ್ಲಿ ಬೆಳಗ್ಗೆ 11 ಗಂಟೆಗೆ ಸಾಮೂಹಿಕ ಉಪವಾಸಕ್ಕೆ ಸೇರಲಿದ್ದಾರೆ. ಹೀಗಾಗಿ ಪ್ರತಿಭಟನಾ ಸ್ಥಳಕ್ಕೆ ತೆರಳುವ ರಸ್ತೆಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಕಳೆದ ಭಾನುವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂಡಿಯಾ ಮೈತ್ರಿಕೂಟ ಮೆಗಾ ರ‍್ಯಾಲಿ ಆಯೋಜನೆ ಮೂಲಕ ಬೃಹತ್ ಶಕ್ತಿ ಪ್ರದರ್ಶನ ನಡೆಸಿತ್ತು. ಕೇಂದ್ರೀಯ ತನಿಖಾ ಸಂಸ್ಥೆಗಳ ಮೂಲಕ ಬಿಜೆಪಿಯು ಪ್ರತಿಪಕ್ಷಗಳನ್ನು ನಾಶಮಾಡುತ್ತಿದೆ ಎಂದು ಆರೋಪಿಸಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಅಶ್ವಿನಿ ಪುನೀತ್ ವಿರುದ್ಧ ಆಕ್ಷೇಪಾರ್ಹ ಫೋಸ್ಟ್, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ