Select Your Language

Notifications

webdunia
webdunia
webdunia
webdunia

ಸಮ್ಮಿಶ್ರ ಸರ್ಕಾರದಲ್ಲಿ ಮೈತ್ರಿ ಧರ್ಮ ಪಾಲನೆಯಾಗುತ್ತಿಲ್ಲ- ಕೈ ನಾಯಕ ಎಂ.ಟಿ.ಬಿ. ನಾಗರಾಜ್ ಆರೋಪ

ಸಮ್ಮಿಶ್ರ ಸರ್ಕಾರದಲ್ಲಿ ಮೈತ್ರಿ ಧರ್ಮ ಪಾಲನೆಯಾಗುತ್ತಿಲ್ಲ- ಕೈ ನಾಯಕ ಎಂ.ಟಿ.ಬಿ. ನಾಗರಾಜ್ ಆರೋಪ
ಬೆಂಗಳೂರು , ಗುರುವಾರ, 9 ಮೇ 2019 (11:51 IST)
ಬೆಂಗಳೂರು : ಅಡೆತಡೆಗಳನ್ನು ಸರಿಪಡಿಸಿಕೊಂಡು ಹೋದರೆ ಸಮ್ಮಿಶ್ರ ಸರ್ಕಾರ ಪೂರ್ಣಾವಧಿ ಉಳಿಯುತ್ತದೆ ಎಂದು ಮೈತ್ರಿ ಸರ್ಕಾರದ ಸಚಿವ ಎಂ.ಟಿ.ಬಿ. ನಾಗರಾಜ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.




ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದಲ್ಲಿ ಮೈತ್ರಿ ಧರ್ಮ ಪಾಲನೆಯಾಗುತ್ತಿಲ್ಲ. ಅಧಿಕಾರಿಗಳ ವರ್ಗಾವಣೆ ಮತ್ತು ಅಭಿವೃದ್ಧಿ ಕಾರ್ಯಗಳಲ್ಲಿ ಪಾರದರ್ಶಕತೆ ಇಲ್ಲವಾಗಿದೆ. ಕಾಂಗ್ರೆಸ್ ಶಾಸಕರು, ಸಚಿವರ ಕ್ಷೇತ್ರಗಳಲ್ಲಿ ಸಿಎಂ ಕುಮಾರಸ್ವಾಮಿ ಮತ್ತು ಸಚಿವ ರೇವಣ್ಣ ಹಸ್ತಕ್ಷೇಪ ಜಾಸ್ತಿಯಾಗಿದೆ ಎಂದು ಆರೋಪಿಸಿದ್ದಾರೆ.


ಸಿದ್ದರಾಮಯ್ಯ ಅವರ ಆಡಳಿತದಲ್ಲಿ ಪಾರದರ್ಶಕತೆ ಪ್ರಾಮಾಣಿಕತೆ ಕಾಯ್ದುಕೊಳ್ಳಲಾಗಿತ್ತು. ಎಲ್ಲಾ ಸಮುದಾಯಗಳನ್ನು ಸಮಾನವಾಗಿ ಕಂಡು, ಸಮಾನವಾಗಿ ಅನುದಾನ ಹಂಚಿಕೆ ಮಾಡಲಾಗಿತ್ತು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇದ್ದ ಸಂದರ್ಭದಲ್ಲಿ ಶಾಸಕನಾಗಿ ಮಾಡಿದ ಸೇವೆಯನ್ನು ಮೈತ್ರಿ ಸರ್ಕಾರದಲ್ಲಿ ಸಚಿವನಾಗಿದ್ದರೂ ನನಗೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಶಿವಳ್ಳಿ ಸಾವಿಗೆ ಮೈತ್ರಿ ಸರ್ಕಾರವೇ ಕಾರಣ; ಶ್ರೀರಾಮುಲು ವಿರುದ್ಧ ಪ್ರಕರಣ ದಾಖಲಿಸಲು ಮುಂದಾದ ಕಾಂಗ್ರೆಸ್