Webdunia - Bharat's app for daily news and videos

Install App

ಸರ್ಕಾರದ ವಿರುದ್ಧ ಹೋರಾಟಕ್ಕೆ ಮೈತ್ರಿ ಅನಿವಾರ್ಯ: ಬಸವರಾಜ ಬೊಮ್ಮಾಯಿ

Webdunia
ಬುಧವಾರ, 13 ಸೆಪ್ಟಂಬರ್ 2023 (12:51 IST)
ಬೆಂಗಳೂರು : ಈ ಅನಿಷ್ಟ ಸರ್ಕಾರದ ವಿರುದ್ಧ ಹೋರಾಟ ಅವಶ್ಯಕತೆ ಇದೆ. ಹಾಗಾಗಿ ಜೆಡಿಎಸ್ ಜೊತೆ ಮೈತ್ರಿ ಅನಿವಾರ್ಯ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
 
ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಎರಡೂ ವಿರೋಧ ಪಕ್ಷಗಳು ಒಂದಾಗಬೇಕು ಎಂಬ ನಿರೀಕ್ಷೆ ಇದೆ. ಮುಂದಿನ ಸಾಧಕ-ಬಾಧಕಗಳ ಬಗ್ಗೆ ಚರ್ಚೆಯಾಗಬೇಕಿದೆ. ಎರಡೂ ಪಕ್ಷದ ವರಿಷ್ಠರು ಸೇರಿ ತೀರ್ಮಾನ ಮಾಡಲಿದ್ದಾರೆ ಎಂದರು.

ಎರಡೂ ಪಕ್ಷಗಳು ಅಸಹಾಯಕವಾಗಿವೆ ಎಂದು ಕಾಂಗ್ರೆಸ್ ಟೀಕೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈಗ ಐಎನ್ಡಿಐಎ ಒಕ್ಕೂಟ ಒಗ್ಗಟ್ಟಾಗಿದ್ದಾರೆ. ಒಬ್ಬರಿಗೊಬ್ಬರು ಆಗದ ಮಮತಾ ಬ್ಯಾನರ್ಜಿ, ಸಿಪಿಐ, ಸಿಪಿಎಂ, ಅರವಿಂದ ಕೇಜ್ರಿವಾಲ್, ಕಾಂಗ್ರೆಸ್ ಎಲ್ಲರೂ ಒಟ್ಟಾಗಿದ್ದಾರೆ. ಎಲ್ಲ ವಿರೋಧ ಪಕ್ಷಗಳು ಒಟ್ಟಾಗಿವೆ. ಹಾಗಾದರೆ ಅವು ಅಸಹಾಯಕರಾ? ರಾಜಕಾರಣದ ಇತಿಹಾಸದಲ್ಲಿ ಅನೇಕ ಬದಲಾವಣೆ ಆಗಿದೆ ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ, ಅಡ್ವಾಣಿ ಅವರನ್ನು ಭೇಟಿ ಆಗಿದ್ದರು ಎಂಬ ಬಿ.ಕೆ. ಹರಿಪ್ರಸಾದ್ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಸಿದ್ದರಾಮಯ್ಯನವರೇ ಉತ್ತರ ನೀಡಿದ್ದಾರೆ. ನಾಯಕರ ಭೇಟಿ ಮಾಡಿದರೆ ಸಿದ್ಧಾಂತ ಬದಲಾಗುವುದಿಲ್ಲ ಎಂದು ಹೇಳಿದ್ದಾರೆ. ಅದರ ಅರ್ಥ ಏನು ಎಂದು ಪ್ರಶ್ನಿಸಿದರು. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments