Webdunia - Bharat's app for daily news and videos

Install App

ಕೆಟ್ಟ ಸರ್ಕಾರ ತೆಗೆಯಲು ಮೈತ್ರಿ ಒಳ್ಳೆಯದು : ರಮೇಶ್ ಜಾರಕಿಹೊಳಿ

Webdunia
ಮಂಗಳವಾರ, 19 ಸೆಪ್ಟಂಬರ್ 2023 (10:06 IST)
ಬೆಂಗಳೂರು : ರಾಜ್ಯದಲ್ಲಿ ಈಗ ಇರುವ ಕೆಟ್ಟ ಸರ್ಕಾರವನ್ನು ತೆಗೆಯಲು ಬಿಜೆಪಿ-ಜೆಡಿಎಸ್ ಮೈತ್ರಿ ಒಳ್ಳೆಯದು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
 
ಜೆಪಿ ನಗರದ ನಿವಾಸದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿಯವರ ಆರೋಗ್ಯ ವಿಚಾರಿಸಿ, ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದ್ದಾರೆ. ಈ ವೇಳೆ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಹೈಕಮಾಂಡ್ ಏನೇ ನಿರ್ಧಾರ ತೆಗೆದುಕೊಂಡರು ಅದನ್ನು ಸ್ವಾಗತಿಸುತ್ತೇನೆ. ಆದಷ್ಟು ಮೈತ್ರಿ ಆದರೆ ಒಳ್ಳೆಯದು. ರಾಜ್ಯದಲ್ಲಿ ಇರುವ ಇಂತಹ ಕೆಟ್ಟ ಸರ್ಕಾರ ತೆಗೆಯಲು ಮೈತ್ರಿ ಒಂದು ಮಾರ್ಗವಾಗಿದೆ.

ಕುಮಾರಸ್ವಾಮಿಯವರು ಈ ಸರ್ಕಾರದ ವಿರುದ್ಧ ಸತತವಾಗಿ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಮೈತ್ರಿ ಆದರೆ ಎರಡು ಪಕ್ಷಗಳಿಗೂ ಶಕ್ತಿ ಬರಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments