Publish Date: Tue, 19 Feb 2019 (20:18 IST)
Updated Date: Tue, 19 Feb 2019 (20:19 IST)
ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭಗೊಂಡಿರುವಂತೆ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಪಕ್ಷಗಳಲ್ಲಿ ಸೀಟು ಹಂಚಿಕೆಯಲ್ಲಿ ಮೆಗಾ ಫೈಟ್ ನಡೆಯುತ್ತಿದೆ.
ಮುಂದಿನ ಲೋಕಸಭಾ ಚುನಾವಣೆಗೆ ಮೈತ್ರಿಗೆ ಮುಂದಾಗಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ನಡುವೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಹಗ್ಗಜಗ್ಗಾಟ ಮುಂದುವರೆದಿದೆ. ಜೆಡಿಎಸ್ಗೆ 7-8 ಕ್ಷೇತ್ರಗಳನ್ನು ಮಾತ್ರ ಬಿಟ್ಟುಕೊಡಲು ಕಾಂಗ್ರೆಸ್ ನಾಯಕರು ಒಲವು ತೋರಿದ್ದಾರೆ. ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ನಡೆದ ಕಾಂಗ್ರೆಸ್ ಪಕ್ಷದ ಸಮನ್ವಯ ಸಮಿತಿ ಸಭೆಯಲ್ಲಿ ಜೆಡಿಎಸ್ಗೆ 7-8 ಸ್ಥಾನಗಳಿಗಿಂತ ಹೆಚ್ಚು ಸ್ಥಾನ ಬಿಡುವುದು ಸರಿಯಲ್ಲ, ಹಾಲಿ ಕಾಂಗ್ರೆಸ್ ಸಂಸದರು ಇರುವ ಕ್ಷೇತ್ರಗಳಂತೂ ಕೈ ವಶದಲ್ಲಿರಬೇಕೆಂಬುದು ನಾಯಕರ ಒತ್ತಾಸೆಯಾಗಿದೆ.
ಲೋಕಸಭಾ ಚುನಾವಣೆಯ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಲ್ಲಿ ವ್ಯಕ್ತವಾಗುತ್ತಿರುವ ಅಭಿಪ್ರಾಯಗಳನ್ನು ಗಮನಿಸಿದರೆ ಸೀಟು ಹಂಚಿಕೆ ಕಗ್ಗಂಟಾಗುವ ಸಾಧ್ಯತೆಗಳು ಹೆಚ್ಚಿವೆ.