Publish Date: Tue, 12 Sep 2017 (13:16 IST)
Updated Date: Tue, 12 Sep 2017 (13:20 IST)
ಬೆಂಗಳೂರು: ಬಿಬಿಎಂಪಿಯಲ್ಲಿ ಮತ್ತೆ ಜೆಡಿಎಸ್ ಜತೆ ಕಾಂಗ್ರೆಸ್ ಮೈತ್ರಿ ಮುಂದುವರೆಯುತ್ತೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಬಿಎಂಪಿಯಲ್ಲಿ ಜೆಡಿಎಸ್ ಜತೆ ಮೈತ್ರಿ ಆಗುತ್ತೆ ಅನಿಸುತ್ತೆ. ಗೃಹ ಸಚಿವನಾಗಿ ದೇವೇಗೌಡರನ್ನು ಭೇಟಿಯಾಗಿದ್ದೇನೆ. ಮೇಯರ್ ಪಟ್ಟ ಬೇಕು ಎಂದು ಹೇಳಿದ್ದಾರೆ. ಹೀಗಾಗಿ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚಿಸುತ್ತೇವೆ. ಬಿಬಿಎಂಪಿಯಲ್ಲಿ ಕೆಲಸವಾಗ್ತಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಸಿಎಂ ಗಮನಕ್ಕೆ ತಂದು ಕುಮಾರಸ್ವಾಮಿ ಜತೆ ಮಾತುಕತೆ ನಡೆಸುತ್ತೇವೆ ಎಂದು ಹೇಳಿದ್ದಾರೆ.
ಇನ್ನು ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಹಂತಕರನ್ನು ಬಂಧಿಸುವಲ್ಲಿ ಯಶಸ್ವಿಯಾಗುತ್ತೇವೆ. ತನಿಖೆ ನಡೆಯುತ್ತಿದ್ದು, ತನಿಖೆಯ ವಿವರಗಳನ್ನು ಬಹಿರಂಗವಾಗಿ ಹೇಳಲಿಕ್ಕಾಗುವುದಿಲ್ಲ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.