Select Your Language

Notifications

webdunia
webdunia
webdunia
webdunia

ಕೈಗಾರಿಕೆಗಳ ಸ್ಥಾಪನೆಗೆ ಅವಕಾಶ ನೀಡಿ : ಜಗದೀಶ್ ಶೆಟ್ಟರ್

ಜಗದೀಶ್ ಶೆಟ್ಟರ್
ಹುಬ್ಬಳ್ಳಿ : ನೂತನ ಕೈಗಾರಿಕೆಗಳ ಸ್ಥಾಪನೆಗೆ ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿಯ ಅಧಿಕಾರಿಗಳು ಅವಕಾಶ ಮಾಡಿಕೊಡಬೇಕು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮನವಿ ಮಾಡಿದ್ದಾರೆ.

ತಮ್ಮ ಗೃಹ ಕಚೇರಿಯಲ್ಲಿ ಕರ್ನಾಟಕ ಕೈಗಾರಿಕ ಪ್ರದೇಶಗಳ ಅಭಿವೃದ್ಧಿ ಮಂಡಳಿ ಮತ್ತು ಕೈಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು. ಈ ವೇಳೆ ಅವರು, ಎಫ್.ಎಂ.ಜಿ.ಸಿ. ಕ್ಲಸ್ಟರ್ ಹಾಗೂ ಇತರ ಕೈಗಾರಿಕೆಗಳನ್ನು ಸ್ಥಾಪಿಸಲು ಅಗತ್ಯವಿರುವ ಖಾಲಿ ಪ್ರದೇಶಗಳನ್ನು ಕೈಗಾರಿಕೋದ್ಯಮಿಗಳಿಗೆ ಒದಗಿಸಬೇಕು. ಈ ಮೂಲಕ ಕೈಗಾರಿಕೆಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಹೊಸ ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯ ಇರುವ ಸವಲತ್ತು ಮತ್ತು ಅನುಕೂಲಗಳನ್ನು ಅಧಿಕಾರಿಗಳು ಮಾಡಿಕೊಡಬೇಕು. ಜಿಲ್ಲೆಯಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಒತ್ತು ನೀಡಬೇಕು. ಇದರಿಂದ ನಗರ ಅಭಿವೃದ್ಧಿ ಹೊಂದಲಿದೆ ಎಂದು ಅವರು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೊದಲು ಅವರ ನಾಯಕರು ಯಾರು ಅಂತ ತೀರ್ಮಾನ ಮಾಡಿಕೊಳ್ಳಲಿ- ಡಿಕೆಶಿ