Select Your Language

Notifications

webdunia
webdunia
webdunia
Wednesday, 2 April 2025
webdunia

ಪ್ರಾಸಿಕ್ಯೂಷನ್‌ಗೆ ಅನುಮತಿ, ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬಿವೈ ವಿಜಯೇಂದ್ರ

Chief Minister Siddaramaiah

Sampriya

ಬೆಂಗಳೂರು , ಶನಿವಾರ, 17 ಆಗಸ್ಟ್ 2024 (15:06 IST)
ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುತ್ತಿದ್ದ ಹಾಗೇ ನೈತಿಕ ಹೊಣೆ ಮುಖ್ಯಮಂತ್ರಿಯವರು ರಾಜೀನಾಮೆ ನೀಡಬೇಕೆಂದು ಎಂದು ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಆಗ್ರಹಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ತನಿಖೆ ಪಾರದರ್ಶಕವಾಗಿ ನಡೆಯಲು ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ಅವರು ಕೂಡಲೇ  ರಾಜೀನಾಮೆ ನೀಡಬೇಕು ಆಗ್ರಹಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ವಿಜಯೇಂದ್ರ,ಗೌರವಾನ್ವಿತ ರಾಜ್ಯಪಾಲರು ತಮ್ಮ ಸಂವಿಧಾನ ದತ್ತ ಅಧಿಕಾರ ಚಲಾಯಿಸಿ ಮುಖ್ಯಮಂತ್ರಿಗಳ  ಮುಡಾ ಹಗರಣದ ದೂರಿಗೆ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ.

ಸಾಕಷ್ಟು ದಾಖಲೆ, ಪುರಾವೆಗಳನ್ನು ಇಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ಭ್ರಷ್ಟ ಹಗರಣಗಳ ವಿರುದ್ಧ ಹಾಗೂ ಮುಖ್ಯಮಂತ್ರಿಗಳ ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದರ ವಿರುದ್ಧ ಎಷ್ಟೇ ಹೋರಾಟ ನಡೆಸಿದರೂ ತಮ್ಮನ್ನು ಜಗ್ಗಿಸುವವರಿಲ್ಲ ಎಂದು ಭಂಡತನ ಪ್ರದರ್ಶಿಸುತ್ತಿದ್ದ ಸಿದ್ದರಾಮಯ್ಯನವರು ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯಲು ಅನುವಾಗುವಂತೆ ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ಮುಖ್ಯಮಂತ್ರಿ ಸ್ಥಾನದ ಘನತೆ  ಉಳಿಸಲಿ ಎಂದು ಬರೆದುಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹಿಂದಿಯಲ್ಲಿ ಮಾತನಾಡಿ ಎಂದಿದ್ದಕ್ಕೆ ಪತ್ರಕರ್ತನಿಗೆ ಕ್ಲಾಸ್ ತೆಗೆದುಕೊಂಡ ಮಲ್ಲಿಕಾರ್ಜುನ ಖರ್ಗೆ