Publish Date: Tue, 20 Dec 2022 (07:18 IST)
Updated Date: Mon, 19 Dec 2022 (22:23 IST)
ಬೆಳಗಾವಿ : ಕಾನೂನು ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಜಿಲ್ಲಾಡಳಿತದ ನಿರ್ದೇಶನದ ಮೇರೆಗೆ ಮಹಾಮೇಳಾವ್ಗೆ ಅನುಮತಿ ನೀಡಿಲ್ಲ.
ಬೆಳಗಾವಿಯಲ್ಲಿ ಕಿಡಿಗೇಡಿಗಳು ಬಾಲ ಬಿಚ್ಚಿದ್ರೆ ನಾವು ಸುಮ್ಮನಿರಲ್ಲ ಎಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ನಾಡದ್ರೋಹಿ ಎಂಇಎಸ್ ನಡೆಸುತ್ತಿದ್ದ ಮಹಾಮೇಳಾವ್ಗೆ ಮೊದಲ ಬಾರಿಗೆ ಬ್ರೇಕ್ ಹಾಕಿರುವ ವಿಚಾರಕ್ಕೆ ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮಹಾಮೇಳಾವ್ ನಡೆಸದಂತೆ ನಾವು ನಿನ್ನೆಯೇ ಎಂಇಎಸ್ ನಾಯಕರಿಗೆ ಸೂಚನೆ ನೀಡಿದ್ದೇವೆ.
ಕಾನೂನು ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಜಿಲ್ಲಾಡಳಿತ ಮಹಾಮೇಳಾವ್ಗೆ ಅನುಮತಿ ನೀಡಿಲ್ಲ. ಜಿಲ್ಲಾಡಳಿತದ ನಿರ್ದೇಶನ ಮೇರೆಗೆ ಮಹಾಮೇಳಾವ್ ನಡೆಸಲು ನಾವು ಬಿಟ್ಟಿಲ್ಲ ಎಂದು ತಿಳಿಸಿದ್ದಾರೆ.
ಪ್ರತಿವರ್ಷವೂ ಅನುಮತಿ ಪಡೆಯದಿದ್ದರೂ ಮಹಾಮೇಳಾವ್ ಮಾಡ್ತಿದ್ರು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈ ಹಿಂದೆ ನಡೆದಿದ್ದೇನು? ಹಿಂದಿನ ಪೊಲೀಸರು ತೆಗೆದುಕೊಂಡ ನಿರ್ಧಾರ ಬಗ್ಗೆ ನಾನು ಮಾತನಾಡಲ್ಲ. ಬೆಳಗಾವಿ ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ.