ಫೆಂಗಲ್‌ ಚಂಡಮಾರುತ ಪ್ರಭಾವ ತಗ್ಗಿದರೂ ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಮಳೆ ಸಾಧ್ಯತೆ

Sampriya
ಗುರುವಾರ, 5 ಡಿಸೆಂಬರ್ 2024 (14:49 IST)
ಬೆಂಗಳೂರು: ಫೆಂಗಲ್‌ ಚಂಡಮಾರುತದ ಪ್ರಭಾವ ತಗ್ಗಿದ್ದು, ರಾಜ್ಯದಲ್ಲಿ ಮಳೆ ತಗ್ಗಿದೆ. ಆದರೆ, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನವೂ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ 24 ಗಂಟೆಗಳ ಕಾಲ ಕರ್ನಾಟಕದ ಒಳನಾಡಿನಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನ ಇರಲಿದೆ. ಇಂದು ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಯಾದಗಿರಿ, ರಾಯಚೂರು, ಕೊಪ್ಪಳ, ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಮಂಜು ಆಳದಿಂದ ಮಧ್ಯಮವಾಗಿರುತ್ತದೆ.

ನಾಳೆಯೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾಸನ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾಗ ಸರ್ವೇಗೆ ಬಂದ ಅಧಿಕಾರಿಗಳ ಎದುರು ದೈವ ಮೈಮೇಲೆ ಬಂದ ಹಾಗೇ ವರ್ತಿಸಿದ ವ್ಯಕ್ತಿ

ಸಂಕಷ್ಟದಲ್ಲಿರುವ ರೈತರಿಗೆ ಬಿಡಿಗಾಸನ್ನೂ ನೀಡದ ಸಿದ್ದರಾಮಯ್ಯರ ಸರಕಾರ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯ ಬೆಲೆಯೇರಿಕೆಯ ಬಾದ್ ಷಾ: ಬಿಜೆಪಿ ಕಟು ಟೀಕೆ

ಜನಮಗಣಮನ ಗೀತೆ ರಚಿಸಿದ್ದು ಬ್ರಿಟಿಷರಿಗಾಗಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ: ಆರ್ ಎಸ್ಎಸ್ ಪ್ರಭಾವವೆಂದ ಪ್ರಿಯಾಂಕ್ ಖರ್ಗೆ

ನಿಮ್ಮ ಸ್ಕಿನ್ ರೊಟೀನ್ ಏನು ಸಾರ್.. ಹರ್ಲಿನ್ ಡಿಯೋಲ್ ಪ್ರಶ್ನೆಗೆ ನಾಚಿಕೊಂಡ ಪ್ರಧಾನಿ ಮೋದಿ video

ಮುಂದಿನ ಸುದ್ದಿ
Show comments