Publish Date: Sun, 07 Jul 2019 (10:41 IST)
Updated Date: Sun, 07 Jul 2019 (10:43 IST)
ಬೆಂಗಳೂರು : ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ಕಾಂಗ್ರೆಸ್ ನ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ.
ಆಡಳಿತ ಪಕ್ಷ ಕಾಂಗ್ರೆಸ್ ಮತ್ತು ಜೆಡಿಎಸ್ ನ 14 ಶಾಸಕರು ರಾಜೀನಾಮೆ ನೀಡಿದ್ದು, ಕೆಲವು ಶಾಸಕರು ಮುಂಬೈನಲ್ಲಿ ತಂಗಿದ್ದಾರೆ. ಆದರೆ ಕಾಂಗ್ರೆಸ್ ಶಾಸಕರಾದ ರಾಮಲಿಂಗಾ ರೆಡ್ಡಿ, ಮುನಿರತ್ನ ಮತ್ತು ಸೌಮ್ಯಾ ರೆಡ್ಡಿ ಅವರು ಬೆಂಗಳೂರಿನಲ್ಲಿಯೇ ತಂಗಿದ್ದರು.
ಇದೀಗ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗಾ ರೆಡ್ಡಿ ಅವರು, ನಾನು ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದೇನೆ ಹೊರತು ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ. 46 ವರ್ಷ ಕಾಂಗ್ರೆಸ್ ಪಕ್ಷದಲ್ಲಿ ಇದ್ದೇನೆ. ನನ್ನ ರಾಜಕೀಯ ಬೆಳವಣಿಗೆಗೆ ಕಾಂಗ್ರೆಸ್ ಪಕ್ಷ ಕಾರಣವಾಗಿದೆ. ಇತ್ತೀಚಿನ ಬೆಳವಣಿಗೆಗಳಿಂದ ಬೇಸತ್ತು ಸ್ವಂತ ಇಚ್ಛೆಯಿಂದ ರಾಜೀನಾಮೆ ನೀಡಿದ್ದೇನೆ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.