Webdunia - Bharat's app for daily news and videos

Install App

ಅಮೆಜಾನ್​​ ಉದ್ಯೋಗಿಗಳ ವಜಾಕ್ಕೆ ನಿರ್ಧಾರ

Webdunia
ಶುಕ್ರವಾರ, 11 ನವೆಂಬರ್ 2022 (17:42 IST)
ಸಾಮಾಜಿಕ ಜಾಲತಾಣ ಕಂಪನಿಗಳಾದ ಮೆಟಾ ಹಾಗೂ ಟ್ವಿಟರ್ ಬೆನ್ನಲ್ಲೇ ಇದೀಗ ಅಮೆರಿಕದ ಟೆಕ್ ಮತ್ತು ಇ-ಕಾಮರ್ಸ್ ಕಂಪನಿ ಅಮೆಜಾನ್ ಕೂಡ ಉದ್ಯೋಗಿಗಳನ್ನು ವಜಾಗೊಳಿಸಲು ಆರಂಭಿಸಿದೆ ಎಂದು ವರದಿಯಾಗಿದೆ. ಆರ್ಥಿಕ ಕುಸಿತದ ಈ ಸಂದರ್ಭದಲ್ಲಿ ಕಂಪನಿಗೆ ಲಾಭದಾಯಕವಾಗಿರದ ಉಪಕ್ರಮಗಳನ್ನು ತಡೆಹಿಡಿಯಬೇಕಾದ ಅನಿವಾರ್ಯತೆ ಇದೆ ಎಂದು ಅಮೆಜಾನ್ ಹೇಳಿದೆ. ನೇಮಕಾತಿ ಪ್ರಕ್ರಿಯೆಯನ್ನು ಸದ್ಯಕ್ಕೆ ತಡೆಹಿಡಿದಿರುವುದಾಗಿ ಕಳೆದ ವಾರವಷ್ಟೇ ಅಮೆಜಾನ್ ಘೋಷಿಸಿತ್ತು. ತಮ್ಮನ್ನು ಕಂಪನಿ ಕೆಲಸದಿಂದ ವಜಾಗೊಳಿಸಿದೆ ಎಂದು ಅಮೆಜಾನ್ ಉದ್ಯೋಗಿ, ಸಾಫ್ಟ್​ವೇರ್ ಎಂಜಿನಿಯರ್ ಜೇಮಿ ಝಾಂಗ್ ಎಂಬುವವರು ಲಿಂಕ್ಡ್​ಇನ್​ನಲ್ಲಿ ಸಂದೇಶ ಪ್ರಕಟಿಸಿದ್ದಾರೆ. ಅಮೆಜಾನ್ ರೋಬೊಟಿಕ್ಸ್ AIನಲ್ಲಿ ನನ್ನ ಒಂದೂವರೆ ವರ್ಷದ ಉದ್ಯೋಗ ಮುಕ್ತಾಯಗೊಂಡಿದೆ. ಅಚ್ಚರಿಯ ವಜಾದೊಂದಿಗೆ ಉದ್ಯೋಗ ಕೊನೆಗೊಂಡಿದೆ. ನಮ್ಮ ಇಡೀ ರೋಬೊಟಿಕ್ಸ್​ ತಂಡವನ್ನೇ ವಜಾಗೊಳಿಸಲಾಗಿದೆ ಎಂದು ಅವರು ಬರೆದುಕೊಂಡಿದ್ದಾರೆ. ಲಿಂಕ್ಡ್​ಇನ್ ಮಾಹಿತಿ ಪ್ರಕಾರ ಅಮೆಜಾನ್​ನ ರೋಬೊಟಿಕ್ಸ್​ ತಂಡದಲ್ಲಿ 3,766 ಉದ್ಯೋಗಿಗಳಿದ್ದಾರೆ. ವಾಸ್ತವದಲ್ಲಿ ಎಷ್ಟು ಉದ್ಯೋಗಿಗಳು ಇದ್ದಾರೆ ಎಂಬುದನ್ನು ಇನ್ನಷ್ಟೇ ದೃಢಪಡಿಸಿಕೊಳ್ಳಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments