Publish Date: Mon, 17 Dec 2018 (15:40 IST)
Updated Date: Mon, 17 Dec 2018 (15:45 IST)
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಕಳ್ಳ ಕಳ್ಳ ಎಂದು ಹೇಳುವ ಮುಖೇಶ್ ಅಂಬಾನಿ ಜತೆಗೆ ಸಚಿವ ಡಿ.ಕೆ. ಶಿವಕುಮಾರ್ ಇರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಕಾರಣವಾಗುತ್ತಿದೆ.
ಇತ್ತೀಚೆಗಷ್ಟೇ ಉದ್ಯಮ ದಿಗ್ಗಜ ಮುಖೇಶ್ ಅಂಬಾನಿ ಪುತ್ರಿಯ ಅದ್ದೂರಿ ವಿವಾಹ ನೆರವೇರಿತು. ಈ ವೈಭವೋಪೇತ ಮದುವೆಯಲ್ಲಿ ಗಣ್ಯಾತಿಗಣ್ಯರ ದಂಡೆ ಹರಿದು ಬಂದಿತ್ತು. ಈ ಗಣ್ಯರ ಪೈಕಿ ರಾಜ್ಯದ ಪ್ರಭಾವಿ ಕಾಂಗ್ರೆಸ್ ನಾಯಕ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಪಾಲ್ಗೊಂಡು ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಜೊತೆ ಫೋಟೊ ಕ್ಲಿಕ್ಕಿಸಿಕೊಂಡಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದನ್ನು ಪ್ರತಿ ಪಕ್ಷ ಜಿಜೆಪಿ ಅಸ್ತ್ರವನ್ನಾಗಿ ಬಳಸಿಕೊಳ್ಳಲು ಮುಂದಾಗಿದೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅನಿಲ್ ಅಂಬಾನಿ ಉಲ್ಲೇಖಿಸಿ ಮೋದಿ ಅವರನ್ನು ಟೀಕಿಸುತ್ತಿದ್ದಾರೆ. ಆದರೆ ಸಚಿವ ಡಿಕೆ ಶಿವಕುಮಾರ್ ಭೇಟಿಯಾಗಿ ಅಂಬಾನಿಯವರುನ್ನು ಅಪ್ಪಿಕೊಳ್ತಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಜನರು ವ್ಯಂಗ್ಯವಾಡಿದ್ದಾರೆ.