ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೀಳಿಯುತ್ತಿರುವ ಸುಮಲತಾಗೆ ಯಾವುದೇ ಕಾರಣಕ್ಕೂ ವೋಟ್ ಹಾಕಲ್ಲ ಎಂದು ಮಂಡ್ಯ ಮುಸ್ಲಿಮರು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಮುಸ್ಲಿಂ ಮಹಿಳೆ ಮಾಧ್ಯಮವೊಂದರಲ್ಲಿ ಮಾತನಾಡಿ, ಮುಸ್ಲಿಂ ಸಮುದಾಯವನ್ನು ಬಿಜೆಪಿಯವರು ಟಾರ್ಗೆಟ್ ಮಾಡುತ್ತಾರೆ. ಜಾತಿ ರಾಜಕೀಯ ಮಾಡುತ್ತಾರೆ. ಹೀಗಾಗಿ ಯಾವುದೇ ಕಾರಣಕ್ಕೂ ಮುಸ್ಲಿಂ ಜನಾಂಗ ಬಿಜೆಪಿಗೆ ವೋಟ್ ಹಾಕಲ್ಲ. ಆದರೆ ಪ್ರಧಾನಿಯಾಗಿರುವ ನರೇಂದ್ರ ಮೋದಿಯವರೇ ಸುಮಲತಾ ಅವರಿಗೆ ಆಶೀರ್ವಾದ ಮಾಡಿ ಎಂದು ಅಧಿಕೃತವಾಗಿ ಹೇಳಿದ್ದಾರೆ. ಅಲ್ಲಿಗೆ ಅವರು ಬಿಜೆಪಿ ಅಭ್ಯರ್ಥಿ ಎಂದು ಅವರೇ ಒಪ್ಪಿಕೊಂಡಂತೆ ಆಯಿತು. ಹೀಗಾಗಿ ಪಕ್ಷೇತರ ಅಭ್ಯರ್ಥಿಗೆ ನಾವು ವೋಟ್ ಹಾಕಲ್ಲ ಎಂದು ಹೇಳಿದ್ದಾರೆ.
ಅಂಬರೀಶ್ ಅಭಿಮಾನಿಗಳಾಗಿರುವ ನಮಗೆ ಮೊದಲೇ ಗೊಂದಲ ಇತ್ತು. ಅಣ್ಣ ಚಿರಸ್ಮರಣೆ ಆಗಿದ್ದರೂ ಕೂಡ ಅವರು ನಮ್ಮ ಮನದಲ್ಲಿ ಉಳಿದುಕೊಂಡಿದ್ದಾರೆ. ಹೀಗಾಗಿ ಅವರ ಮುಖಾಂತರ ನಾವು ಸುಮಲತಾ ಅವರಿಗೆ ಬೆಂಬಲ ಕೊಡಬೇಕು ಅಂದುಕೊಂಡಿದ್ದೆವು. ಆದ್ರೆ ಇದೀಗ ಮೋದಿ ಕೊಟ್ಟಿರುವ ಹೇಳಿಕೆ ಗಮನಿಸಿದ್ರೆ ಅವರು ಬಿಜೆಪಿ ಕ್ಯಾಂಡಿಡೇಟ್ ಎಂದು ಖಚಿತವಾಗಿದೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.