Publish Date: Mon, 20 Jun 2016 (19:39 IST)
Updated Date: Mon, 20 Jun 2016 (19:47 IST)
ಮಂಡ್ಯ ವಿಧಾನಸಭೆ ಕ್ಷೇತ್ರದ ಶಾಸಕ ಅಂಬರೀಶ್ ಅವರಿಗೆ ಕಾಂಗ್ರೆಸ್ ಪಕ್ಷ ಎಲ್ಲವನ್ನೂ ಕೊಟ್ಟಿದೆ. ಅವರು ಸಹ ಪಕ್ಷಕ್ಕಾಗಿ ಸಾಕಷ್ಟು ದುಡಿದಿದ್ದಾರೆ. ಇಗ ಏನೋ ಆಯ್ತು ಎಂದು ರಾಜೀನಾಮೆ ನೀಡುವುದು ಸರಿಯಲ್ಲ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ರಾಜ್ಯ ಸಚಿವ ಸಂಪುಟ ಪುನರ್‌ರಚನೆಯಾಗಬೇಕು ಎಂದು ಬೇಡಿಕೆ ಇತ್ತು. ಮುಂದಿನ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸಂಪುಟವನ್ನು ವಿಸ್ತರಿಸಲಾಗಿದೆ. ಯಾರಿಗೆ ಸಚಿವ ಸ್ಥಾನ ನೀಡಬೇಕು ಯಾರಿಗೆ ಬಿಡಬೇಕು ಎಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಿಟ್ಟ ವಿಚಾರ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ದೊರೆತಿಲ್ಲ ಎಂದು ಅಸಮಾಧಾನಗೊಂಡಿರುವ ಶಾಸಕರು ತಾಳ್ಮೆಯಿಂದಿರಬೇಕು. ತಾಳ್ಮೆಯಿದ್ದರೆ ರಾಜಕೀಯದಲ್ಲಿ ಯಶಸ್ವಿಯಾಗಲು ಸಾಧ್ಯ ಎಂದು ಹೇಳಿದ್ದಾರೆ.
ಧರ್ಮಸಿಂಗ್ ಅವರು ಮುಖ್ಯಮಂತ್ರಿಯಾದ ಅವಧಿಯಲ್ಲಿ ನನ್ನನ್ನು ಸಂಪುಟದಿಂದ ದೂರವಿಟ್ಟಿದ್ದರು. ನನ್ನ ಮೇಲೆ ಹಲವು ಆರೋಪಗಳು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಸಂಪುಟದಿಂದ ದೂರವಿಟ್ಟಿದ್ದರು. ಆದರೆ, ನಾನು ತಾಳ್ಮೆ ಕಳೆದುಕೊಳ್ಳಲಿಲ್ಲ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ