Publish Date: Thu, 17 Jan 2019 (18:42 IST)
Updated Date: Thu, 17 Jan 2019 (18:44 IST)
ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದಲ್ಲಿ ರುಂಡ ಕತ್ತರಿಸಿ ತಲೆಗೆ ಚಾಕುವಿನಿಂದ ಇರಿದಂತೆ ಫೋಟೋ ಕ್ರಿಯೇಟ್ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಆರೋಪಿ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಫೋಟೊವನ್ನು ಶೇರ್ ಮಾಡಿದ ಕಿಡಿಗೇಡಿಗಳನ್ನೂ ಬಂಧನ ಮಾಡಬೇಕು ಎಂದು ಒತ್ತಾಯಿಸಿ ಕಲಬುರಗಿ ಜಿಲ್ಲೆಯ ನೆಲೋಗಿ ಮತ್ತು ಜೇವರ್ಗಿ ಪೊಲೀಸ್ ಠಾಣೆಗಳ ಮುಂದೆ ಪ್ರತಿಭಟನೆ ನಡೆಯಿತು.
ನೆಲೋಗಿಯ ವಿನೋದ ಎಂಬ ಯುವಕ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದ್ದಾನೆ. ವಿನೋದ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು. ವಿವಿಧ ದಲಿತಪರ ಸಂಘಟನೆಗಳ ನೂರಾರು ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು. ಕಿಡಿಗೇಡಿಯನ್ನು ಬಂಧಿಸಿ ಗಡಿಪಾರು ಮಾಡುವಂತೆ ಆಗ್ರಹ ಮಾಡಲಾಯಿತು. ಪ್ರತಿಭಟನಾ
ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿತ್ತು.