Publish Date: Mon, 20 Jun 2016 (18:27 IST)
Updated Date: Mon, 20 Jun 2016 (18:31 IST)
ನೂರು ಕೋಟಿ ಕೊಟ್ಟರು ತಮ್ಮ ರಾಜೀನಾಮೆಯನ್ನು ವಾಪಸ್ ಪಡೆಯಲ್ಲ ಎಂದು ರೆಬಲ್ ಸ್ಟಾರ್ ಅಂಬರೀಶ್ ಹೇಳಿದ್ದಾರೆಂದು ಜೆಡಿಎಸ್ ಎಂಎಲ್‌ಸಿ ಟಿ.ಎ.ಶರವಣ ಹೇಳಿದ್ದಾರೆ.
ಸಚಿವ ಸಂಪುಟದಿಂದ ತಮ್ಮನ್ನು ಕೈಬಿಟ್ಟಿರುವುದಕ್ಕೆ ಅಸಮಾಧಾನಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಂಡ್ಯ ವಿಧಾನ ಸಭೆ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅಂಬರೀಶ್ ಅವರ ಮನವೊಲಿಸಲು ಬಂದಿದ್ದ ಜೆಡಿಎಸ್ ಎಂಎಲ್‌ಸಿ ಟಿ.ಎ.ಶರವಣ, ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬೇಡಿ ಎಂದು ಮನವಿ ಮಾಡಿದ್ದಾರೆ.
ಅಂಬರೀಶ್ ಅವರ ಭೇಟಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಜೆಡಿಎಸ್ ಎಂಎಲ್‌ಸಿ ಟಿ.ಎ.ಶರವಣ, ಪಕ್ಷದ ಪರವಾಗಿ ಅಂಬರೀಶ್ ಅವರನ್ನು ಮನವೊಲಿಸಲು ಬಂದಿದ್ದು, ಅವರು ಯಾವುದೇ ಕಾರಣಕ್ಕೂ ರಾಜೀನಾಮೆ ಹಿಂಪಡೆಯುವುದಿಲ್ಲ ಎಂದು ತಿಳಿಸಿದ್ದಾರೆಂದು ಹೇಳಿದರು.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ