Select Your Language

Notifications

webdunia
webdunia
webdunia
webdunia

ಅಮಿತ್ ಶಾ ಬಸವಕಲ್ಯಾಣ ಪ್ರವಾಸ

ಅಮಿತ್ ಶಾ ಬಸವಕಲ್ಯಾಣ ಪ್ರವಾಸ
ಬೀದರ್ , ಸೋಮವಾರ, 27 ಫೆಬ್ರವರಿ 2023 (08:35 IST)
ಬೀದರ್ : ಗಡಿ ಜಿಲ್ಲೆ ಬೀದರ್ನಲ್ಲಿ ವಿಜಯ ಸಂಕಲ್ಪ ರಥಯಾತ್ರೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ ನೀಡಲಿದ್ದು, ಮಾರ್ಚ್ 3 ರಂದು ಅವರು ಬಸವಕಲ್ಯಾಣಕ್ಕೆ ಬರಲಿದ್ದಾರೆ.
 
ಭಾನುವಾರ ಪಕ್ಷದ ಕಚೇರಿಯ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್, ಮಾರ್ಚ್ 3 ರಂದು 11 ಗಂಟೆಗೆ ಅಮಿತ್ ಶಾ ವಿಶೇಷ ವಿಮಾನದ ಮೂಲಕ ಬಸವಕಲ್ಯಾಣಕ್ಕೆ ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಅಮಿತ್ ಶಾ 11 ಗಂಟೆಗೆ ಬಸವಕಲ್ಯಾಣ ಭೇಟಿ ನೀಡಿದ ಬಳಿಕ 11:30ಕ್ಕೆ ಅನುಭವ ಮಂಟಪಕ್ಕೆ ಭೇಟಿ ನೀಡಿ, ಅಲ್ಲಿಂದಲ್ಲೇ ವಿಜಯ ಸಂಕಲ್ಪ ಯಾತ್ರೆ ರಥಕ್ಕೆ ಚಾಲನೆ ನೀಡಲಿದ್ದಾರೆ. ನಂತರ ಬಸವಕಲ್ಯಾಣ ಪಟ್ಟಣದಲ್ಲಿ ಅದ್ದೂರಿ ರೋಡ್ ಶೋ ಮಾಡಿ ಸಮಾವೇಶದಲ್ಲಿ ಭಾಗಿಯಾಗುತ್ತಾರೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಟಿಪ್ಪು ಸರ್ಕಲ್ ವಿವಾದ : ಸಂಘಟನೆಗಳಿಗೆ ವಾರ್ನಿಂಗ್, 144 ಸೆಕ್ಷನ್ ಜಾರಿ