Publish Date: Sat, 14 Oct 2017 (17:41 IST)
Updated Date: Sat, 14 Oct 2017 (17:42 IST)
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಜೈಲಿಗೆ ಹೋಗಿ ಬಂದ ಗಿರಾಕಿಗಳು ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷದ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ಸರಕಾರ ನುಡಿದಂತೆ ನಡೆದ ಸರಕಾರ. ರೈತರ ಪರ, ಬಡವರ, ದೀನ ದಲಿತರ, ಶೋಷಿತರ ಪರವಾದ ಸರಕಾರವಾಗಿದೆ ಎಂದು ತಿಳಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಆಟ ಕರ್ನಾಟಕದಲ್ಲಿ ನಡೆಯೋಲ್ಲ. ಇಂತಹ ಸಾವಿರಾರು ಮೋದಿ ಮತ್ತು ಅಮಿತ್ ಶಾ ಬಂದರೂ ಚುನಾವಣೆಯಲ್ಲಿ ಗೆಲ್ಲುವುದು ನಾವೇ ಎಂದು ಗುಡುಗಿದ್ದಾರೆ.
ಅಮಿತ್ ಶಾ ಮತ್ತು ಬಿಎಸ್‌ವೈ ಹೇಳಿಕೆಗಳು ಭೂತದ ಬಾಯಲ್ಲಿ ಭಗವದ್ಗೀತೆಯಂತೆ. ಅಮಿತ್ ಶಾ ಮಾಯಾ ಮಂತ್ರ ರಾಜ್ಯದಲ್ಲಿ ನಡೆಯಲು ಬಿಡುವುದಿಲ್ಲ ಎಂದು ಗುಡುಗಿದ್ದಾರೆ.
ರಾಜ್ಯದ ಯಾವುದೇ ಸಚಿವರ ಮೇಲೆ ಭ್ರಷ್ಟಾಚಾರದ ಆರೋಪವಿಲ್ಲ.ಜಾತಿ-ಧರ್ಮದ ಆಧಾರದಲ್ಲಿ ರಾಜಕೀಯ ನಡೆಯುವುದಿಲ್ಲ. 2018ರಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.