ಬೆಂಗಳೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಜನ್ಮದಿನವಾಗಿದ್ದು, ಹುಟ್ಟುಹಬ್ಬಕ್ಕೆ ಕೇಂದ್ರ ಗೃಹಸಚಿವ ಅಮಿತ್ ಶಾ ಕರೆ ಮಾಡಿ ಶುಭಾಶಯ ತಿಳಿಸಿದ್ದಾರೆ. ಈ ವೇಳೆ ಬಿವೈವಿ ಉತ್ತರ ಹೇಗಿತ್ತು ಇಲ್ಲಿದೆ ನೋಡಿ ವಿಡಿಯೋ.
ಇಂದು ಹುಟ್ಟುಹಬ್ಬವಿದ್ದರೂ ವಿಜಯೇಂದ್ರ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ರೈತರ ಜೊತೆಗೆ ಬೆಳಿಗ್ಗೆಯೇ ಇದ್ದು ಹೋರಾಟ ನಡೆಸುತ್ತಿದ್ದಾರೆ. ಈ ನಡುವೆ ತಮ್ಮ ಜನ್ಮದಿನದ ಪ್ರಯುಕ್ತ ಇಂದು ಬೆಳಗಾವಿ ಜಿಲ್ಲೆಯ ಐತಿಹಾಸಿಕ ಶ್ರೀಕ್ಷೇತ್ರ ಕಲ್ಲೋಳಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಇನ್ನು ಬಿವೈವಿ ಹುಟ್ಟುಹಬ್ಬದ ನಿಮಿತ್ತ ಕೇಂದ್ರ ಗೃಹಸಚಿವ ಅಮಿತ್ ಶಾ ಕರೆ ಮಾಡಿ ಶುಭಾಶಯ ತಿಳಿಸಿದ್ದಾರೆ. ಆ ವಿಡಿಯೋವನ್ನು ಬಿಜೆಪಿ ಹಂಚಿಕೊಂಡಿದೆ. ಪ್ರಣಾಮ್ ಸಾಬ್.. ಬೆಳಗಾವಿಯಲ್ಲಿ ರೈತರ ಪ್ರತಿಭಟನೆ ನಡೆಯುತ್ತಿದೆ. ಅದರಲ್ಲಿ ಪಾಲ್ಗೊಂಡಿದ್ದೇನೆ ಎಂದು ಅಮಿತ್ ಶಾಗೆ ಮಾಹಿತಿ ನೀಡಿದ್ದಾರೆ.
ವಿಜಯೇಂದ್ರ ಅವರ 50ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಗಾಂಧಿನಗರದ ಶ್ರೀ ಅಣ್ಣಮ್ಮ ದೇವಿ ದೇವಸ್ಥಾನದಲ್ಲಿ ಪೂಜೆ ಮತ್ತು ಅನ್ನಸಂತರ್ಪಣೆಯನ್ನು ಹಮ್ಮಿಕೊಳ್ಳಲಾಗಿತ್ತು.