Publish Date: Tue, 02 Apr 2024 (09:16 IST)
Updated Date: Tue, 02 Apr 2024 (09:18 IST)
ಬೆಂಗಳೂರು: ಕೇಂದ್ರ ಗೃಹ ಸಚಿವ, ಬಿಜೆಪಿ ಚಾಣಕ್ಯ ಎಂದೇ ಖ್ಯಾತರಾಗಿರುವ ಅಮಿತ್ ಶಾ ಇಂದು ಬೆಂಗಳೂರಿನಲ್ಲಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ.
ನಿನ್ನೆ ಸಂಜೆಯೇ ಅಮಿತ್ ಶಾ ಬೆಂಗಳೂರಿಗೆ ಬಂದಿಳಿದಿದ್ದಾರೆ. ಇಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಅಮಿತ್ ಶಾ ಪ್ರಚಾರ ನಡೆಸಲಿದ್ದಾರೆ. ಈ ವೇಳೆ ಬೆಂಗಳೂರು ಗ್ರಾಮಾಂತರ ಅಭ್ಯರ್ಥಿ ಡಾ ಸಿಎನ್ ಮಂಜುನಾಥ್ ಕೂಡಾ ಸಾಥ್ ನೀಡಲಿದ್ದಾರೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿಕೆ ಸುರೇಶ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಹೀಗಾಗಿ ಡಿಕೆ ಬ್ರದರ್ಸ್ ಗೆ ಇದು ಪ್ರತಿಷ್ಠೆಯ ಕಣ. ಹೀಗಾಗಿ ಅಮಿತ್ ಶಾ ಡಿಕೆ ಬ್ರದರ್ಸ್ ಕೋಟೆಯಿಂದಲೇ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ. ಅಲ್ಲದೆ ಸಂಜೆ ಕ್ಷೇತ್ರದಲ್ಲಿ ರೋಡ್ ಶೋ ಕೂಡಾ ನಡೆಸಲಿದ್ದಾರೆ.
ಸಿದ್ದರಾಮಯ್ಯ, ಡಿಕೆ ಬ್ರದರ್ಸ್ ಗೆ ಹಳೆ ಮೈಸೂರು ಭಾಗದಲ್ಲಿ ಹೆಚ್ಚಿನ ಪ್ರಾಬಲ್ಯವಿದೆ. ಹೀಗಾಗಿ ಇಲ್ಲಿಯೇ ಕಾಂಗ್ರೆಸ್ ಹಿಮ್ಮೆಟ್ಟಿಸಲು ಬಿಜೆಪಿ ಚಾಣಕ್ಯ ರಣಕಹಳೆ ಮೊಳಗಿಸಲಿದ್ದಾರೆ. ಇದಕ್ಕೆ ಮೊದಲು ಬಿಜೆಪಿ-ಜೆಡಿಎಸ್ ನಾಯಕರೊಂದಿಗೆ ಮೀಟಿಂಗ್ ನಡೆಸಲಿದ್ದಾರೆ.