Select Your Language

Notifications

webdunia
webdunia
webdunia
webdunia

ಮಂಡ್ಯದಲ್ಲಿ ಅಮಿತ್ ಶಾ ಸಮಾವೇಶ

ಮಂಡ್ಯದಲ್ಲಿ ಅಮಿತ್ ಶಾ ಸಮಾವೇಶ
ಮಂಡ್ಯ , ಶನಿವಾರ, 24 ಡಿಸೆಂಬರ್ 2022 (14:26 IST)
ಮಂಡ್ಯ : ಹಳೇ ಮೈಸೂರು ಭಾಗದಲ್ಲಿ ಕಮಲ ಅರಳಿಸಲೇಬೇಕೆಂದು ಪಣ ತೊಟ್ಟಿರುವ ಬಿಜೆಪಿ ಡಿ.30ಕ್ಕೆ ಮಂಡ್ಯದಲ್ಲಿ ಸಮಾವೇಶ ಆಯೋಜಿಸಿದೆ.
 
ಹಳೆ ಮೈಸೂರು ಭಾಗದಲ್ಲಿ ಪ್ರಮುಖ ರಾಜಕೀಯ ಜಿದ್ದಜಿದ್ದಿನ ಜಿಲ್ಲೆಯಾದ ಮಂಡ್ಯ ಜಿಲ್ಲೆಯಲ್ಲಿ 5 ರಿಂದ 6 ಕ್ಷೇತ್ರಗಳನ್ನು ಗೆಲ್ಲಲು ಮಾಸ್ಟರ್ ಪ್ಲಾನ್ ಮಾಡಿದ್ದು ಈ ಸಮಾವೇಶಕ್ಕೆ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ.

ಡಿ.30ರಂದು ಮನ್ಮುಲ್ನ ಮೆಗಾ ಡೈರಿ ಉದ್ಘಾಟನೆಯನ್ನು ಅಮಿತ್ ಶಾ ಮಾಡಲಿದ್ದಾರೆ. ಸರ್ಕಾರಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಂಡ್ಯಕ್ಕೆ ಬರುತ್ತಿರುವ ಅಮಿತ್ ಶಾ ಪಕ್ಷದ ಕಾರ್ಯಕ್ರಮದಲ್ಲೂ ಭಾಗಿಯಾಗಲಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ರಾಮ ಸೇತು ರಚನೆ ಬಗ್ಗೆ ಕೇಂದ್ರ ಉತ್ತರ ಏನು?