Publish Date: Mon, 01 Jan 2018 (12:02 IST)
Updated Date: Mon, 01 Jan 2018 (12:04 IST)
ಮುಂಬರುವ ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಮ್ಯಾಜಿಕ್ ಕೆಲಸ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯಕ್ಕೆ ಅಮಿತ್ ಶಾ ಅವರು ಭೇಟಿಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಅವರು, ರಾಜ್ಯದ ಜನರು ಬದಲಾಗಿದ್ದಾರೆ. ಆದ್ದರಿಂದ ಅಮಿತ್ ಶಾ ಕರ್ನಾಟಕದಲ್ಲಿ ಮ್ಯಾಜಿಕ್ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.
ಭಾನುವಾರ ಬೆಂಗಳೂರಿಗೆ ಬಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು, ಯಲಹಂಕ ಬಳಿಯಿರುವ ರೆಸಾರ್ಟನಲ್ಲಿ ಪಕ್ಷದ ಶಾಸಕರು, ಸಂಸದರು ಹಾಗೂ ಮುಖಂಡರೊಂದಿಗೆ ಚುನಾವಣೆಯ ಬಗ್ಗೆ ಚರ್ಚೆ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.