Publish Date: Sat, 12 Aug 2017 (17:12 IST)
Updated Date: Sat, 12 Aug 2017 (17:15 IST)
ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೂಚನೆ ನೀಡಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕಾಂಗ ಸಭೆಯಲ್ಲಿ ಅಮಿತ್ ಶಾ ಪಕ್ಷದ ಮುಖಂಡರಿಗೆ ಹಿಂದುಳಿದ ಮತಗಳ ಕ್ರೋಢಿಕರಿಸುವಂತೆ ಸಲಹೆ ನೀಡಿದ್ದಾರೆ. ಪಕ್ಷದ ರಣತಂತ್ರ ಹೈಕಮಾಂಡ್ ರೂಪಿಸುತ್ತದೆ ಎಂದು ಮಾಹಿತಿ ನೀಡಿದ್ದಾಗಿ ತಿಳಿಸಿದ್ದಾರೆ.
ನಟ, ನಿರ್ದೇಶಕ ಉಪೇಂದ್ರ ಸ್ವಂತ ರಾಜಕೀಯ ಪಕ್ಷ ಸ್ಥಾಪಿಸಲು ಸ್ವತಂತ್ರರು. ಆದರೆ, ಹೊಸ ಪಕ್ಷ ಕಟ್ಟುವುದು ಸುಲಭವಲ್ಲ. ಆದ್ದರಿಂದ, ಬಿಜೆಪಿ ಪಕ್ಷದ ಸಿದ್ದಾಂತಗಳಿಗೆ ಒಪ್ಪಿ ಬರುವುದಾದಲ್ಲಿ ಅವರಿಗೆ ಸ್ವಾಗತವಿದೆ ಎಂದರು.
ಪಕ್ಷದ ಟಿಕೆಟ್ ಹಂಚಿಕೆಯಲ್ಲಿ ರಾಜ್ಯ ನಾಯಕರ ಪಾತ್ರವಿರುವುದಿಲ್ಲ. ಪಕ್ಷದ ಹೈಕಮಾಂಡ್ ಟಿಕೆಟ್ ಹಂಚಿಕೆ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಾಗಿ ಅಮಿತ್ ಶಾ ತಿಳಿಸಿದ್ದಾರೆಂದು ಕೆ.ಎಸ್. ಈಶ್ವರಪ್ಪ ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.