Publish Date: Tue, 26 Jun 2018 (11:03 IST)
Updated Date: Tue, 26 Jun 2018 (11:04 IST)
ಬೆಂಗಳೂರು: ನಿನ್ನೆಯಷ್ಟೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾರ ಗುಜರಾತ್ ನ ನಿವಾಸಕ್ಕೆ ತೆರಳಿದ್ದ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪಗೆ ಸ್ಪಷ್ಟ ಸೂಚನೆ ಸಿಕ್ಕಿದೆ ಎನ್ನಲಾಗಿದೆ.
ಬಿಎಸ್ ವೈ ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಅಮಿತ್ ಶಾಗೆ ಮಾಹಿತಿ ನೀಡಿದ್ದರು. ಈ ಸಂದರ್ಭದಲ್ಲಿ ಪಕ್ಷದ ಗುಪ್ತ ತಂಡ ಎಲ್ಲವನ್ನೂ ಗಮನಿಸುತ್ತಿದೆ. ಯಾವ ಸಂದರ್ಭದಲ್ಲಿ ಏನು ಮಾಡಬೇಕು ಎಂಬುದನ್ನು ನಾವೇ ನಿಮಗೆ ಹೇಳುತ್ತೇವೆ ಎಂದು ಅಮಿತ್ ಶಾ ಹೇಳಿದ್ದಾರೆ ಎನ್ನಲಾಗಿದೆ.
ರಾಜ್ಯದ ಸಮ್ಮಿಶ್ರ ಸರ್ಕಾರದ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ಅದು ತಾನಾಗಿಯೇ ಬಿದ್ದು ಹೋಗುತ್ತದೆ. ಸದ್ಯಕ್ಕೆ ಲೋಕಸಭೆ ಚುನಾವಣೆ ಬಗ್ಗೆ ಗಮನಹರಿಸಿ. ಪ್ರಧಾನಿ ಮೋದಿ ಮತ್ತೆ ಪ್ರಧಾನಿಯಾಗಬೇಕು. ಅದಕ್ಕೆ ಬೇಕಾದ ಸಿದ್ಧತೆ ಮಾಡಿ ಎಂದು ಯಡಿಯೂರಪ್ಪಗೆ ಶಾ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.